Friday, October 18, 2024
Google search engine
Homeಮುಖಪುಟಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ - ಸರ್ಕಾರದ ಒತ್ತಡಕ್ಕೆ ಮಣಿದ ಅಧಿಕಾರಿಗಳು - ಕಾಂಗ್ರೆಸ್ ಆರೋಪ

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ – ಸರ್ಕಾರದ ಒತ್ತಡಕ್ಕೆ ಮಣಿದ ಅಧಿಕಾರಿಗಳು – ಕಾಂಗ್ರೆಸ್ ಆರೋಪ

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ವಿಚಾರಣೆ ನಡೆಸುತ್ತಿರುವ ಅಧಿಕಾರಿಗಳು ಸರ್ಕಾರದ ಒತ್ತಡಕ್ಕೆ ಮಣಿದು ರಾಜಕಾರಣಿಗಳ ಬೆಂಬಲ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ತನಿಖಾಧಿಕಾರಿಗಳು ಬಂಧಿಸಿದ್ದಾರೆ. ನ್ಯಾಯಾಲಯದ ಮುಂದೆ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿಗಳು. ತಮಗೆ ಬಂದಿರುವ ಮಾಹಿತಿ ಆಧಾರದ ಮೇಲೆ ಈ ಪ್ರಕರಣದಲ್ಲಿ ಸಚಿವರುಗಳು ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ ಎಂದರು.

ಈ ಪ್ರಕರಣದಲ್ಲಿ ನೆಪ ಮಾತ್ರಕ್ಕೆ ಕೆಲವರನ್ನು ಬಂಧಿಸಿದರೆ ಸಾಲುವುದಿಲ್ಲ. ಎಲ್ಲಾ ಬಂಧಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಸೆಕ್ಷನ್ 164ರ ಪ್ರಕಾರ ಹೇಳಿಕೆ ದಾಖಲಿಸಿಕೊಳ್ಳಬೇಕು. ಆಗ ಈ ರಾಜ್ಯಕ್ಕೆ ನ್ಯಾಯ ಸಿಗಲಿದೆ. ಇದರ ಜೊತೆಗೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular