ಶ್ರೀಲಂಕಾದಲ್ಲಿ ತಲೆದೋರಿರುವ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ದೇಶದಲ್ಲಿ ತುರ್ತುಪರಿಸ್ಥಿತಿಯನ್ನು ಘೋಷಿಸಿದ್ದಾರೆ.
ಶ್ರೀಲಂಕಾದ ಪಶ್ಚಿಮ ಪ್ರಾಂತ್ಯದಲ್ಲಿ ಕರ್ಪ್ಯೂ ವಿಧಿಸಲಾಗಿದೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ಶ್ರೀಲಂಕಾ ಅಧ್ಯಕ್ಷ ಗೊಟಬೋಯ ರಾಜಪಕ್ಸೆ ಪತ್ನಿ ಮತ್ತು ಇಬ್ಬರು ಅಂಗರಕ್ಷಕರೊಂದಿಗೆ ಮಾಲ್ಡೀವ್ ಗೆ ಪರಾರಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಈ ಮಧ್ಯೆ ಕೊಲಂಬೋದಲ್ಲಿರುವ ಭಾರತೀಯ ಹೈಕಮಿಷನ್ ರಾಜಪಕ್ಸೆ ಶ್ರೀಲಂಕಾದಿಂದ ಪ್ರಯಾಣ ಬೆಳೆಸಲು ಭಾರತವು ಅನುಕೂಲ ಮಾಡಿಕೊಟ್ಟಿದೆ ಎಂಬ ಆಧಾರರಹಿತ ಮತ್ತು ಊಹಾತ್ಮಕ ಮಾಧ್ಯಮಗಳ ವರದಿಗಳನ್ನು ಸ್ಪಷ್ಟವಾಗಿ ನಿರಕಾರಿಸುತ್ತದೆ ಎಂದು ಹೇಳಿದೆ.
ಅಧ್ಯಕ್ಷರ ನಿರ್ಗಮನವು ಅವರ ಸಹೋದರ ಮತ್ತು ಮಾಜಿ ಹಣಕಾಸು ಸಚಿವ ಬಸಿಲ್ ರಾಜಪಕ್ಸೆ ಅವರು ದೇಶವನ್ನು ತೊರೆಯಲು ಪ್ರಯತ್ನಿಸುತ್ತಿದ್ದಾಗ ವಿಮಾನ ನಿಲ್ದಾಣದಿಂದ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ.