Sunday, December 22, 2024
Google search engine
Homeಮುಖಪುಟಬಿಬಿಎಂಪಿ ವಾರ್ಡ್ ಮರುವಿಂಗಡಣೆ ಅವೈಜ್ಞಾನಿಕ - ರಾಮಲಿಂಗಾರೆಡ್ಡಿ

ಬಿಬಿಎಂಪಿ ವಾರ್ಡ್ ಮರುವಿಂಗಡಣೆ ಅವೈಜ್ಞಾನಿಕ – ರಾಮಲಿಂಗಾರೆಡ್ಡಿ

ಬಿಬಿಎಂಪಿ ವಾರ್ಡ್ ಮರುವಿಂಗಡಣೆ ಅವೈಜ್ಞಾನಿಕವಾಗಿದ್ದು ಬಿಜೆಪಿ ಪಕ್ಷಕ್ಕೆ ಅನುಕೂಲವಾಗುವಂತೆ ಹಾಗೂ ಸಾರ್ವಜನಿಕರಿಗೆ ಅನಾನುಕೂಲ ವಾಗುವಂತೆ ಮಾಡಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮರುವಿಂಗಡಣೆ ವಿಚಾರವಾಗಿ 3 ಸಾವಿರಕ್ಕೂ ಹೆಚ್ಚು ಆಕ್ಷೇಪಣೆಗಳು ವ್ಯಕ್ತವಾಗಿದ್ದರೂ ಹೆಸರು ಬದಲಾವಣೆ ಹೊರತು ಯಾವುದೇ ವಾರ್ಡ್ ಗಳಲ್ಲಿ ಬದಲಾವಣೆ ತಂದಿಲ್ಲ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಸಂಬಂಧ ಸರ್ಕಾರ ವಾರ್ಡ್ ಮರುವಿಂಗಡಣೆಯನ್ನು ಪ್ರಕಟಿಸಿ 15 ದಿನ ಆಕ್ಷೇಪಣೆಗಳಿಗೆ ಅವಕಾಶ ಮಾಡಿಕೊಟ್ಟಿತ್ತು. ಈ ವಿಚಾರವಾಗಿ 3 ಸಾವಿರಕ್ಕೂ ಹೆಚ್ಚು ಆಕ್ಷೇಪಗಳು ಸಲ್ಲಿಕೆಯಾಗಿದ್ದು ಇದರಲ್ಲಿ ಹಲವು ಅಕ್ಷೇಪಗಳು ವಾರ್ಡ್ ಗಳ ಹೆಸರು ಬದಲಾವಣೆ ವಿಚಾರವಾಗಿವೆ. ಉಳಿದಂತೆ ಎಲ್ಲಾ ಆಕ್ಷೇಪಗಳು ಅವೈಜ್ಞಾನಿಕವಾಗಿ ವಾರ್ಡ್ ಮರುವಿಂಗಡಣೆ ಮಾಡಲಾಗಿದೆ ಎಂಬ ವಿಚಾರವಾಗಿ ಸಲ್ಲಿಕೆಯಾಗಿವೆ ಎಂದು ಹೇಳಿದರು.

ಈಗ ಇಷ್ಟೊಂದು ಆಕ್ಷೇಪ ವ್ಯಕ್ತವಾದರೂ ಕಂದಾಯ ಅಧಿಕಾರಿಗಳಾಗಲೀ, ಜಂಟಿ ಆಯುಕ್ತರಾಗಲೀ ಬಂದು ಪರಿಶೀಲನೆ ನಡೆಸಲೇ ಇಲ್ಲ. ಈಗ ಈ ಅಕ್ಷೇಪಗಳು ಸಿಎಂ ಕಚೇರಿಯಿಂದ ಆಚ ಬರಲೇ ಇಲ್ಲ. 243 ವಾರ್ಡ್ ಗಳು ಸರಿಯಾಗಿವೆ ಎಂದು ಸಣ್ಣ ಬದಲಾವಣೆ ಇಲ್ಲದೆ ಮತ್ತೆ ಅದನ್ನೇ ಬಿಡುಗಡೆ ಮಾಡಿದ್ದಾರೆ. ಕೇವಲ ಹೆಸರಿಗೆ ಮಾತ್ರ ಆಕ್ಷೇಪಗಳನ್ನು ಸಂಗ್ರಹಿಸಿದ್ದಾರೆ ಎಂದು ದೂರಿದರು.

ಜನಸಂಖ್ಯೆ ಆಧಾರದ ಮೇಲೆ ನೋಡಿದರೆ ಪ್ರತಿವಾರ್ಡ್ ಜನಸಂಖ್ಯೆ ಸರಾಸರಿ 35 ಸಾವಿರ ಇರಬೇಕು. ಆದರೆ ಕಾಂಗ್ರೆಸ್ ಪಕ್ಷ ಇರುವ ಕಡೆಗಳಲ್ಲಿ ಪ್ರತಿ ವಾರ್ಡ್್ ಜನಸಂಖ್ಯಾ ಪ್ರಮಾಣ 36,753 ಮತದಾರರು ಇದ್ದಾರೆ. ಬಿಜೆಪಿ ಇರುವ ಕಡೆಗಳಲ್ಲಿ 33,927 ಮತದಾರರು ಬರುತ್ತಾರೆ. ಬ್ಯಾಟರಾಯನಪುರ, ಜಯನಗರ ಚಾಮರಾಜಪೇಟೆ, ದಾಸರಹಳ್ಳಿ ಕ್ಷೇತ್ರಗಳಲ್ಲಿ ಜನಸಂಖ್ಯೆ ಪರಿಗಣಿಸಿದರೆ ಒಂದು ವಾರ್ಡ್ ಗಳನ್ನು ಕಡಿಮೆ ಮಾಡಿ ಅವುಗಳನ್ನು ಬಿಜೆಪಿ ಇರುವ ಕ್ಷೇಥ್ರಗಳಲ್ಲಿ ಸೇರಿಸಿಕೊಂಡಿದ್ದಾರೆ ಎಂದು ಆಪಾದಿಸಿದರು.

ಚಾಮರಾಜಪೇಟೆಯ ವಾರ್ಡ್ ಗಳಲ್ಲಿನ ಜನಸಂಖ್ಯೆ 39 ಸಾವಿರ ಸರಾಸರಿಯಲ್ಲಿದ್ದರೆ ಪಕ್ಕದ ಚಿಕ್ಕಪೇಟೆ ಕ್ಷೇತ್ರದ ವಾರ್ಡ್ ಗಳಲ್ಲಿ ಜನಸಂಖ್ಯೆ ಪ್ರಮಾಣ 32 ಸಾವಿರ ಸರಾಸರಿಯಷ್ಟಿದೆ. ಗೋವಿಂದರಾಜನಗರ ಕ್ಷೇತ್ರದ ವಾರ್ಡ್ ಗಳ ಜನಸಂಖ್ಯೆ ಸರಾಸರಿ 30 ಸಾವಿರಕ್ಕಿಂತ ಕಡಿಮೆ ಇದೆ. ಹೀಗೆ ಜನಸಂಖ್ಯೆ ಆಧಾರದಲ್ಲೂ ಬಿಜೆಪಿಗೊಂದು ರೀತಿ, ಕಾಂಗ್ರೆಸ್ಸಿಗೊಂದು ರೀತಿ ವಾರ್ಡ್ ವಿಂಗಡಣೆ ಮಾಡಿದ್ದಾರೆ ಎಂದು ದೂರಿದರು.

ವಾರ್ಡ್ ಗಳ ಹೆಸರು ಬದಲಾವಣೆ ಅಧಿಕಾರ ಸರ್ಕಾರಕ್ಕಿದೆ. ಆದರೆ ಇಲ್ಲಿ ವಾರ್ಡ್ ಮರುವಿಂಗಡಣಾ ಸಮಿತಿಯೇ ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಹೆಸರುಗಳನ್ನು ಬದಲಾವಣೆ ಮಾಡಿದೆ. ಆ ಮೂಲಕ ಈ ವಾರ್ಡ್ ಗಳ ಮರುವಿಂಗಡಣೆಯಲ್ಲಿ ಸರ್ಕಾರದ ಹಸ್ತಕ್ಷೇಪ ಇದೆ ಎಂದು ಸಾಬೀತಾಗುತ್ತದೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular