Sunday, December 22, 2024
Google search engine
Homeಮುಖಪುಟಮುಖ್ಯಮಂತ್ರಿ ಮಾಡುವುದು ಹೈಕಮಾಂಡ್ ತೀರ್ಮಾನ - ಡಿ.ಕೆ.ಶಿವಕುಮಾರ್

ಮುಖ್ಯಮಂತ್ರಿ ಮಾಡುವುದು ಹೈಕಮಾಂಡ್ ತೀರ್ಮಾನ – ಡಿ.ಕೆ.ಶಿವಕುಮಾರ್

ನಾನೇನು ಸನ್ಯಾಸಿನಾ? ನಾನು ಖಾದಿ ಬಟ್ಟೆ ಹಾಕಿಕೊಂಡು ಬಂದಿದ್ದೇನೆ ಹೊರತು ಕಾವಿ ಬಟ್ಟೆ ಹಾಕಿ ಬಂದಿಲ್ಲ. ಆದರೆ ಅಂತಿಮವಾಗಿ ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಚಾರವನ್ನು ಪಕ್ಷ ತೀರ್ಮಾನ ಮಾಡಲಿದೆ ಎಂದು ಹೇಳಿದ್ದಾರೆ.

ನಾನು ಮುಖ್ಯಮಂತ್ರಿ ಆಗುವುದಕ್ಕಿಂತ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಮುಖ್ಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು ಪಕ್ಷದಲ್ಲಿ ಯಾರು ಮುಖ್ಯಮಂತ್ರಿಯಾಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ. ಎಸ್.ಎಂ.ಕೃಷ್ಣ ಅವರ ನಂತರ ನಾನು ಪಕ್ಷದ ಅಧ್ಯಕ್ಷನಾಗಿದ್ದು, ಒಕ್ಕಲಿಗ ಸಮಾಜ ನನ್ನ ಬೆನ್ನ ಹಿಂದೆ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.

ನಾನೇನು ಸನ್ಯಾಸಿನಾ? ನಾನು ಖಾದಿ ಬಟ್ಟೆ ಹಾಕಿಕೊಂಡು ಬಂದಿದ್ದೇನೆ ಹೊರತು ಕಾವಿ ಬಟ್ಟೆ ಹಾಕಿ ಬಂದಿಲ್ಲ. ಆದರೆ ಅಂತಿಮವಾಗಿ ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಚಾರವನ್ನು ಪಕ್ಷ ತೀರ್ಮಾನ ಮಾಡಲಿದೆ ಎಂದು ಹೇಳಿದ್ದಾರೆ.

ನಾನು ಮುಖ್ಯಮಂತ್ರಿ ಆಗುವುದಕ್ಕಿಂತ ಮುಖ್ಯವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ಅದೇ ನನಗೆ ಮುಖ್ಯ. ಮುಖ್ಯಮಂತ್ರಿ ಯಾರಾಗಬೆಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ ಎಂದಿದ್ದಾರೆ.

ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಡಿ.ಕೆ.ಶಿವಕುಮಾರ್ ಕೇವಲ ಒಂದು ಸಮುದಾಯವಲ್ಲ, ರಾಜ್ಯದ ಎಲ್ಲಾ ಸಮುದಾಯಗಳು, ಪಕ್ಷಾತೀತವಾಗಿ ಜಾತ್ಯತೀತವಾಗಿ ನಮ್ಮ ಬೆಂಬಲಕ್ಕೆ ನಿಲ್ಲಬೇಕು. ನಾವು ಜಾತ್ಯತೀತ ತತ್ವದಲ್ಲಿ ನಡೆದುಕೊಂಡು ಬಂದಿದ್ದು, ಒಂದು ಜಾತಿ ಹಾಗೂ ಧರ್ಮಕ್ಕೆ ನಾಯಕರಲ್ಲ. ಕಾಂಗ್ರೆಸ್ ನಾಯಕ ಎಂದು ಅವರಿಗೆ ಮನವಿ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular