ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರದ ವಿಭಾಗದ ಮುಖ್ಯಸ್ಥ ವೆಂಕಟೇಶ್ವರಲು ಅವರನ್ನು ತುಮಕೂರು ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ನೇಮಕ ಮಾಡಲಾಗಿದೆ.
ತುಮಕೂರು ವಿವಿ ಕುಲಪತಿಯಾಗಲು ವೆಂಕಟೇಶ್ವರ್, ವಿಜಯ್ ಕುಮಾರ್ ಪೂಣಚ್ಚ ಅವರು ಕೂಡ ಸ್ಪರ್ಧೆಯಲ್ಲಿದ್ದರು. ಅಂತಿಮವಾಗಿ ವೆಂಕಟೇಶ್ವರಲು ಅವರನ್ನು ತುಮಕೂರು ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ರಾಜ್ಯಪಾಲರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ರಾಜಾಸಾಬ್ ಅವರು ತುಮಕೂರು ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಅವಧಿಯಲ್ಲಿ ವೆಂಕಟೇಶ್ವರಲು ಕುಲಸಚಿವರಾಗಿ ಕೆಲಸ ಮಾಡಿದ್ದಾರೆ.