ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಸ್ವಾಧೀನಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡಿಲ್ಲ ಎಂದು ಮನನೊಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ನಡೆದಿದೆ.
ತುಮಕೂರು ಜಿಲ್ಲೆ ಚಿಕ್ಕಿನಾಯಕನಹಳ್ಳಿ ತಾಲೂಕಿನ ಸಾಲುಕಟ್ಟೆ ಗ್ರಾಮದ ರೈತ ರಂಗಣ್ಣ ಆತ್ಮಹತ್ಯೆಗೆ ಶರಣಾಗಿರುವ ರೈತ. ಕಾರಣ ರಸ್ತೆ ಕಾಮಗಾರಿಗಾಗಿ ಭೂಸ್ವಾಧೀನಪಡಿಸಿಕೊಂಡಿದ್ದರೂ ಇದುವರೆಗೆ ಪರಿಹಾರ ನೀಡಿಲ್ಲ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆಬಿ ಕ್ರಾಸ್ ನಿಂದ ಹುಳಿಯಾರುವರೆಗೂ ರಸ್ತೆ ಕಾಮಗಾರಿ ನಡೆಯುತ್ತಿದ್ದು ಇದಕ್ಕಾಗಿ ರಂಗಣ್ಣ ಅವರ ಜಮೀನನ್ನು ಸ್ವಾಧೀನಪಡಿಸಿಕೊಂಡಿದ್ದರು. ಪರಿಹಾರ ನೀಡದೆ ಭೂಮಿಯನ್ನು ಬಿಡುವುದಿಲ್ಲವೆಂದು ಒತ್ತಾಯಿಸಿದರೂ ಅಧಿಕಾರಿಗಳು ರಂಗಣ್ಣ ಅವರಿಂದ ಬಲವಂತ ಮಾಡಿ ಸ್ವಾಧೀನಪಡಿಸಿಕೊಂಡಿದ್ದರು ಎನ್ನಲಾಗಿದೆ.
ರಂಗಣ್ಣನವರಿಗೆ ಸೇರಿದ 4 ಗುಂಟೆ ಜಮೀನನ್ನು ವಶಪಡಿಸಿಕೊಂಡಿದ್ದು ರೈತನಿಗೆ ಪರಿಹಾರ ನೀಡಿರಲಿಲ್ಲ ಎನ್ನಲಾಗಿದೆ. ರಂಗಣ್ಣ ಆತ್ಮಹತ್ಯೆ ಮಾಡಿಕೊಳ್ಳಲು ಭೂಸ್ವಾಧೀನಾಧಿಕಾರಿಗಳೇ ಕಾರಣ ಎಂದು ರೈತ ಸಂಘಟನೆಗಳು ಆರೋಪಿಸಿವೆ.