Sunday, December 22, 2024
Google search engine
Homeಮುಖಪುಟಪ್ರವೀಣ್ ಹತ್ಯೆ ಪ್ರಕರಣ - ತನಿಖೆ ಮುಕ್ತ, ಪಾರದರ್ಶಕವಾಗಿರಲಿ - ಪ್ರಿಯಾಂಕ್ ಖರ್ಗೆ ಆಗ್ರಹ

ಪ್ರವೀಣ್ ಹತ್ಯೆ ಪ್ರಕರಣ – ತನಿಖೆ ಮುಕ್ತ, ಪಾರದರ್ಶಕವಾಗಿರಲಿ – ಪ್ರಿಯಾಂಕ್ ಖರ್ಗೆ ಆಗ್ರಹ

ದಕ್ಷಿಣ ಕನ್ನಡ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣದ ತನಿಖೆ ಮುಕ್ತ ಹಾಗೂ ಪಾರದರ್ಶಕವಾಗಿರಬೇಕು. ಇದುವರೆಗೂ ಆಗಿರುವ ಕೋಮುಗಲಭೆ ಹಾಗೂ ಕೋಮು ಹತ್ಯೆಯ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು ಮತ್ತು ನಮ್ಮ ಸಮಾಜದಲ್ಲಿ ಕೋಮು ವಿಷಬೀಜ ಬಿತ್ತುತ್ತಿರುವ ಎಲ್ಲಾ ಸಮುದಾಯಗಳ ಸಂಘಟನೆಗಳನ್ನು ನಿಷೇಧಿಸಬೇಕು. ಇದಕ್ಕೆ ನಾವು ಬೆಂಬಲಿಸುತ್ತೇವೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ಸರ್ಕಾರ ತನ್ನ ಒಂದು ವರ್ಷದ ಸಾಧನೆಯ ಜನೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ಪ್ರವೀಣ್ ಅವರ ಸಾವಿನಿಂದ ತೀವ್ರವಾಗಿ ಮನನೊಂದು ಈ ಕಾರ್ಯಕ್ರಮ ಮಾಡಲು ಮನಸ್ಸು ಒಪ್ಪುತ್ತಿಲ್ಲ ಎಂಬ ಕಾರಣ ಕೊಟ್ಟು ರದ್ದು ಮಾಡಲಾಗಿದೆ ಎಂದು ಹೇಳಿದರು.

ಆದರೆ ಸತ್ಯಾಂಶ ಏನೆಂದರೆ ಪ್ರವೀಣ್ ಅವರ ಹತ್ಯೆಯಾಗಿದ್ದ ಜುಲೈ 23ರಂದು, ಮುಖ್ಯಮಂತ್ರಿಗಳ ಮನಸ್ಸು ಕರಗಿದ್ದು ಜುಲೈ 28 ಬೆಳಗಿನ ಜಾವ 12.30ಕ್ಕೆ ಎಂದು ವ್ಯಂಗ್ಯವಾಡಿದರು.

ಜನಾಕ್ರೋಶದಿಂದಾಗಿ ಜನೋತ್ಸವ ಕಾರ್ಯಕ್ರಮ ರದ್ದಾಗಿದೆ. ಅವರಿಗೆ ನಿಜವಾಗಿಯೂ ಜನರ ಬಗ್ಗೆ ಇಷ್ಟು ಕಾಳಜಿ ಇದ್ದಿದ್ದರೆ ಅವರು ಗುಪ್ತಚರ ಇಲಾಖೆ ಮಾಹಿತಿ ಪಡೆದು 27ರಂದು ಕಾರ್ಯಕ್ರಮವನ್ನ ರದ್ದು ಮಾಡಬಹುದಿತ್ತು. ಸಚಿವರಾದ ಸುನಿಲ್ ಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಅವರಿಗೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ದಿಗ್ಬಂಧನ ಮಾಡಿದಾಗ ಸರ್ಕಾರಕ್ಕೆ ಈ ಜ್ಞಾನೋದಯವಾಗಿದೆ ಎಂದು ಲೇವಡಿ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರು ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳ ರಾಜಿನಾಮೆಗೆ ಪಟ್ಟು ಹಿಡಿದು ಬಿಜೆಪಿ ಸರ್ಕಾರದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎಂದಾದರೆ ಬಿಜೆಪಿ ಸರ್ಕಾರ ಇರಬೇಕೇ ಎಂದು ಜನ ಆಕ್ರೋಶದಿಂದ ಮಾತಾನಾಡಿದಾಗ ಅವರಿಗೆ ಜ್ಞಾನೋದಯವಾಗಿದೆ ಎಂದು ದೂರಿದರು.

ಸರ್ಕಾರ ಅನುಕಂಪ ಹೆಸರಿನಲ್ಲಿ ಯಾರ ಮೇಲೆ ಗೂಬೆಕೂರಿಸಲು ಪ್ರಯತ್ನಿಸುತ್ತಿದೆ. ಪ್ರವೀಣ್ ಅವರ ಪತ್ನಿಯೇ ಈ ಸರ್ಕಾರದಿಂದ ಯಾರಿಗೂ ನ್ಯಾಯ ಸಿಗುವುದಿಲ್ಲ ಎಂದು ಹೇಳಿದ್ದಾರೆ. ಸರ್ಕಾರ ಇನ್ನಾದರೂ ತನ್ನ ವೈಫಲ್ಯವನ್ನು ಒಪ್ಪಿಕೊಳ್ಳಬೇಕು. ರಾಜ್ಯದಲ್ಲಿ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಇದ್ದಾರೆ ಎಂದು ಬಿಜೆಪಿ ಕಾರ್ಯಕರ್ತರಿಗೆ ಅನುಮಾನ ವ್ಯಕ್ತವಾಗುತ್ತಿದೆ ಎಂದು ಹೇಳಿದರು.

ಈ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದು ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣ ಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular