ರಾಜ್ಯ ಸರ್ಕಾರ ಜನನ ಮತ್ತು ಮರಣ ಸಮರ್ಥನಾ ಪತ್ರಗಳನ್ನು ಪಡೆಯಲು ಸಿವಿಲ್ ನ್ಯಾಯಾಲಯದ ಕಾರ್ಯವ್ಯಾಪ್ತಿಯಿಂದ ಕಂದಾಯ ಇಲಾಖೆ ಉಪವಿಭಾಗಾಧಿಕಾರಿಗಳಿಗೆ ಅಧಿಕಾರ ವಹಿಸಿರುವುದು ಭ್ರಷ್ಟಾಚಾರಕ್ಕೆ ಎಡೆ ಮಾಡಿಕೊಟ್ಟಂತೆ ಆಗಿದ ಎಂದು ಆರೋಪಿಸಿ ತುಮಕೂರಿನಲ್ಲಿ ವಕೀಲರು ಪ್ರತಿಭಟನೆ ನಡೆಸಿದರು.
ಸರ್ಕಾರ ಈಗ ಹೊರಡಿಸಿರುವ ಆದೇಶವನ್ನು ವಾಪಸ್ ಪಡೆಯುವಂತೆ ವಕೀಲರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಸರ್ಕಾರದ ಈಗಿನ ಕ್ರಮದಿಂದ ಮಧ್ಯವರ್ತಿಗಳ ಹಾವಳಿಗೆ ಸಾರ್ವಜನಿಕರು ತುತ್ತಾಗುವ ಸಾಧ್ಯತೆ ಹೆಚ್ಚಾಗಿದೆ. ವಕೀಲರಿಗೂ ಕಾಯ್ದೆ ಮಾರಕವಾಲಿದೆ. ಕಾಯ್ದೆಯ ತಿದ್ದುಪಡಿ ಅಧಿಸೂಚನೆಯನ್ನು ಸರ್ಕಾರ ಹಿಂಪಡೆಯಬೇಕೆಂದು ತುಮಕೂರು ಜಿಲ್ಲಾ ವಕೀಲರ ಸಂಘ ಆಗ್ರಹಿಸಿದೆ.
ಈಗಾಗಲೇ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಕಂದಾಯ ಪ್ರಕರಣಗಳು ಸಾಕಷ್ಟು ಪ್ರಮಾಣದಲ್ಲಿ ಬಾಕಿ ಇವೆ. ಅವುಗಳನ್ನು ಇತ್ಯರ್ಥಗೊಳಿಸಲು ವಿಳಂಬವಾಗುತ್ತಿದೆ.
ಆದ್ದರಿಂದ ಸರ್ಕಾರ ಹಸ್ತಕ್ಷೇಪ ಮಾಡದೆ ಜನನ ಮತ್ತು ಮರಣ ಸಮರ್ಥನಾ ಪತ್ರವನನು ಪಡೆಯಲು ಕಾಯ್ದೆಯ ವ್ಯಾಪ್ತಿಯನ್ನು ಹಿಂದಿನಂತೆಯೇ ಸಿವಿಲ್ ನ್ಯಾಯಾಲಯದ ವ್ಯಾಪ್ತಿಯಲ್ಲಿ ಉಳಿಸಿಕೊಳ್ಳಬೇಕೆಂದು ವಕೀಲರು ಪ್ರತಿಭಟನೆ ನಡೆಸಿ ಒತ್ತಾಯಿಸಿದರು.