Sunday, December 22, 2024
Google search engine
Homeಮುಖಪುಟ4 ತಿಂಗಳು ಕಳೆದರೂ ಅತಿಥಿ ಉಪನ್ಯಾಸಕರಿಗೆ ಮೌಲ್ಯಮಾಪನ ಭತ್ಯೆ ನೀಡದ ತುಮಕೂರು ವಿವಿ

4 ತಿಂಗಳು ಕಳೆದರೂ ಅತಿಥಿ ಉಪನ್ಯಾಸಕರಿಗೆ ಮೌಲ್ಯಮಾಪನ ಭತ್ಯೆ ನೀಡದ ತುಮಕೂರು ವಿವಿ

ತುಮಕೂರು ವಿಶ್ವವಿದ್ಯಾಲಯದ ಬಿ.ಎ, ಬಿಎಸ್.ಸಿ, ಬಿಕಾಂ ಪದವಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆದು ನಾಲ್ಕು ತಿಂಗಳು ಕಳೆದರೂ ಇದುವರೆಗೂ ಮೌಲ್ಯಮಾಪನ ಭತ್ಯೆ ನೀಡಿಲ್ಲ ಎಂದು ಅತಿಥಿ ಉಪನ್ಯಾಸಕರು ಅಳಲು ತೋಡಿಕೊಂಡಿದ್ದಾರೆ.

ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದು ಐದು ತಿಂಗಳು ಕಳೆದರೂ ಫಲಿತಾಂಶವನ್ನು ಪ್ರಕಟಿಸಿಲ್ಲದೆ ವಿದ್ಯಾರ್ಥಿಗಳು ಕಂಗಾಲಾಗುವಂತೆ ಮಾಡಿದೆ.

ತುಮಕೂರು ವಿಶ್ವವಿದ್ಯಾಲಯದ ಪದವಿ ಕಾಲೇಜುಗಳಲ್ಲಿ ಶೇ.70ರಷ್ಟು ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದು, ಮೊದಲ ಸೆಮಿಸ್ಟಾರ್ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದೆ. ಇನ್ನುಳಿದ ಸೆಮಿಸ್ಟರ್ ಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನವನ್ನು ವಿವಿಧ ಕಾರಣಗಳಿಗಾಗಿ ಅತಿಥಿ ಉಪನ್ಯಾಸಕರು ಬಹಿಷ್ಕರಿಸಿದ್ದಾರೆ.

ರಾಜ್ಯದ ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ಮೌಲ್ಯಮಾಪನ ನಡೆದು ಒಂದು ತಿಂಗಳಿಗೆ ಮೌಲ್ಯಮಾಪನ ಭತ್ಯೆಯನ್ನು ನೀಡಿದ್ದರೆ ತುಮಕೂರು ವಿಶ್ವವಿದ್ಯಾಲಯದಲ್ಲಿ ಪದವಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಗಿದು ನಾಲ್ಕು ತಿಂಗಳು ಕಳೆದಿದೆ. ಆದರೂ ಮೌಲ್ಯಮಾಪನ ಭತ್ಯೆ ಹಾಕದೆ ವಿಳಂಬ ನೀತಿ ಅನಸುರಿಸಲಾಗುತ್ತಿದೆ ಎಂದು ಅತಿಥಿ ಉಪನ್ಯಾಸಕರಿಂದ ಆಕ್ರೋಶ ವ್ಯಕ್ತವಾಗಿದೆ.

ತುಮಕೂರು ವಿಶ್ವವಿದ್ಯಾಲಯದ ಗೊಂದಲದ ಆದೇಶಗಳಿಂದಾಗಿ ಅತಿಥಿ ಉಪನ್ಯಾಸಕರು ಮೌಲ್ಯಮಾಪನ ಕಾರ್ಯವನ್ನು ಬಹಿಷ್ಕರಿಸಿದ್ದರು. ಬೇರೆ ವಿಶ್ವವಿದ್ಯಾಲಯಗಳಲ್ಲಿ 60 ಅಂಕಗಳ ಒಂದು ಉತ್ತರ ಪತ್ರಿಕೆಯನ್ನು ಮೌಲ್ಯಮಾಪನ ಮಾಡಲು 20 ರೂ ನೀಡಿದರೆ, ತುಮಕೂರು ವಿಶ್ವವಿದ್ಯಾಲಯದಲ್ಲಿ 9 ರೂ ನೀಡುವುದಾಗಿ ವಿವಿ ಅಧಿಸೂಚನೆ ಹೊರಡಿಸಿತ್ತು. ಈ ಗೊಂದಲದಿಂದಾಗಿ ಯಾರೂ ಕೂಡ ಮೌಲ್ಯಮಾಪನ ಕಾರ್ಯಕ್ಕೆ ಹೋಗಲಿಲ್ಲ ಎಂದು ಹೇಳಲಾಗುತ್ತಿದೆ.

ತುಮಕೂರು ಜಿಲ್ಲೆಯಲ್ಲಿ ಶೇಕಡ 70ರಷ್ಟು ಮಂದಿ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರೇ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ತುಮಕೂರು ವಿವಿಯ ಗೊಂದಲದ ಕಾರಣದಿಂದ ಶೇ.60 ಅತಿಥಿ ಉಪನ್ಯಾಸಕರು ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗಿಲ್ಲ. ಹೀಗಾಗಿ ಪದವಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕುಂಟುತ್ತಾ ಸಾಗಿದೆ. ಆದ್ದರಿಂದ ಇದು ಫಲಿತಾಂಶ ವಿಳಂಬಕ್ಕೂ ಕಾರಣವಾಗಿದೆ.

ವಿಶ್ವವಿದ್ಯಾಲಯದ ಸಿಬ್ಬಂದಿಯನ್ನು ಕೇಳಿದರೆ ಇನ್ನೂ ಬಿಲ್ ಆಗಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ಮೌಲ್ಯ ಮಾಪನ ಕಾರ್ಯ ಮುಗಿದು 4 ತಿಂಗಳು ಕಳೆದರೂ ಮೌಲ್ಯಮಾಪನ ಭತ್ಯೆ ನೀಡಿಲ್ಲ. ಹೀಗಾಗಿ ನಾವು ತೊಂದರೆ ಅನುಭವಿಸುವಂತೆ ಆಗಿದೆ ಎಂದು ಅತಿಥಿ ಉಪನ್ಯಾಸಕರು ದಿ ನ್ಯೂಸ್ ಕಿಟ್.ಇನ್ ಗೆ ತಿಳಿಸಿದ್ದಾರೆ.

ಅತಿಥಿ ಉಪನ್ಯಾಸಕರು ಮೌಲ್ಯಮಾಪನ ಕಾರ್ಯಕ್ಕೆ ಬಹಿಷ್ಕಾರ ಹಾಕಿರುವುದರಿಂದ ಪೂರ್ಣಾವಧಿ ಸಹಾಯ ಪ್ರಾಧ್ಯಾಪಕರಿಗೆ ನೋಟೀಸ್ ನೀಡಿ ಕರೆಸಿಕೊಂಡು ಮೌಲ್ಯಮಾಪನ ಮಾಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ತುಮಕೂರು ವಿಶ್ವವಿದ್ಯಾಲಯದಲ್ಲಿ ಸಾವರ್ಕರ್ ಅಧ್ಯಯನ ಪೀಠ ಸ್ಥಾಪಿಸಲು ಹಣವಿದೆ. ಮೌಲ್ಯಮಾಪನ ಕಾರ್ಯಕ್ಕೆ ಹಾಜರಾದ ಅತಿಥಿ ಉಪನ್ಯಾಸಕರಿಗೆ ಮೌಲ್ಯಮಾಪನ ಭತ್ಯೆ ನೀಡಲು ಹಣದ ಕೊರತೆ ಎದುರಾಗುತ್ತದೆ. ತುಮಕೂರು ವಿಶ್ವವಿದ್ಯಾಲಯ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular