ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಪ್ರಕರಣ ದಾಖಲಾದ ಐದು ದಿನಗಳ ನಂತರ ಅವರ ಬಂಧನವಾಗಿದೆ.
ಶಿವಮೂರ್ತಿ ಶರಣರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಾಗಿದ್ದರೂ ಪ್ರತಿಪಕ್ಷಗಳು ಯಾವುದೇ ಪ್ರತಿಕ್ರಿಯೆಯನ್ನು ನೀಡಿರಲಿಲ್ಲ. ಐದು ದಿನಗಳ ನಂತರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಚಿತ್ರದುರ್ಗದ ಮುರುಘಾ ಮಠದ ಸ್ವಾಮಿಗಳು ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಚಿತ್ರದುರ್ಗದ ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ. ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.