ಚಿತ್ರದುರ್ಗದ ಮುರುಘಾ ಮಠದ ಮಠಾಧೀಶರಾದ ಶಿವಮೂರ್ತಿ ಮುರುಘ ಶರಣರು ಭಾಗಿಯಾಗಿರುವ ಭೀಕರ ಬೆಳವಣಿಗೆಗಳ ಮಾಧ್ಯಮ ವರದಿಗಳಿಂದ ನಾನು ಹೆಚ್ಚು ವಿಚಲಿತನಾಗಿದ್ದು ಚಿತ್ರದುರ್ಗದ ಮುರುಘಾ ಮಠ ನೀಡಿರುವ ಬಸವಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸುವುದಾಗಿ ಬರ ಅಂದ್ರೆ ಎಲ್ಲರಿಗೂ ಇಷ್ಟ ಖ್ಯಾತಿಯ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಹೇಳಿದ್ದಾರೆ.
ಪ್ರೌಢಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪದಡಿ ಶಿವಮೂರ್ತಿ ಶರಣರ ವಿರುದ್ಧ ಫೊಕ್ಸೋ ಮತ್ತು ಎಸ್.ಸಿ/ಎಸ್.ಟಿ ದೌರ್ಜನ್ಯ ವಿರೋಧಿ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದ್ದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.
ಮಕ್ಕಳ ಮೇಲಿನ ಯಾವುದೇ ರೀತಿಯ ಅಪರಾಧಗಳನ್ನು ಖಂಡಿಸಲು ಯಾವುದೇ ಪದಗಳು ಬಲವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣದಲ್ಲಿ ಬದುಕಿಳಿದವರ ಒಗ್ಗಟ್ಟಿನಿಂದ ಮತ್ತು ನ್ಯಾಯಕ್ಕಾಗಿ 2017ರಲ್ಲಿ ಮಠವು ನನಗೆ ನೀಡಿದ ಬಸವಶ್ರೀ ಪ್ರಶಸ್ತಿಯನ್ನು (ಮತ್ತು ಅದರೊಂದಿಗೆ ಬಂದ 5 ಲಕ್ಷ ರೂ ಬಹುಮಾನದ ಮೊತ್ತವನ್ನು ಚಿಕ್ ಮೂಲಕ) ಹಿಂದಿರುಗಿಸುತ್ತೇನೆ ಎಂದು ಹೇಳಿದ್ದಾರೆ.
ಘೋರ ಘಟನೆಗಳನ್ನು ಬೆಳಕಿಗೆ ತರಲು ಮೈಸೂರು ಮೂಲದ ಎನ್.ಜಿ.ಒ ಒಡನಾಡಿಯ ಪ್ರಯತ್ನಗಳು ಮತ್ತು ಸಾಮಾಜಿಕ ಅನಿಷ್ಠಗಳ ವಿರುದ್ದ ದಶಕಗಳ ಹೋರಾಟದ ಬಗ್ಗೆ ನನ್ನ ಮೆಚ್ಚುಗೆಯನ್ನು ದಾಖಲಿಸಲು ಬಯಸುತ್ತೇನೆ ಎಂದಿದ್ದಾರೆ.
ಹಗರಣದ ತನಿಖೆಯನ್ನು ತೀವ್ರಗೊಳಿಸಲು ಮತ್ತು ಯಾವುದೇ ಆಧಾರದ ಮೇಲೆ ರಾಜಿ ಮಾಡಿಕೊಳ್ಳಲು ಅವಕಾಶ ನೀಡದಂತೆ ಕರ್ನಾಟಕ ಸರ್ಕಾರಕ್ಕೆ ನಾನು ಮನವಿ ಮಾಡುತ್ತೇನೆ ಎಂದು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕ ಪಿ.ಸಾಯಿನಾಥ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪಿ.ಸಾಯಿನಾಥ್ ಹೇಳಿಕೆಯನ್ನು ಹಿರಿಯ ಪತ್ರಕರ್ತ ಜಿ.ಎನ್.ಮೋಹನ್ ಫೇಸ್ಬುಕ್ ವಾಲ್ ನಲ್ಲಿ ಹಂಚಿಕೊಂಡಿದ್ದಾರೆ.