ಬೆಂಗಳೂರಿನಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ರಾತ್ರಿ ಬೆಂಗಳೂರಿನಲ್ಲಿ 7 ಸೆಂ.ಮೀಟರ್ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರಿನಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು ಬೆಂಗಳೂರಿಗರು ಮತ್ತಷ್ಟು ಸಂಕಷ್ಟವನ್ನು ಎದುರಿಸಬೇಕಾಗಿದೆ.
ಬೆಂಗಳೂರಿನಲ್ಲಿ ಕಳೆದ 100 ವರ್ಷಗಳಲ್ಲಿ ಇಂಥ ಮಳೆ ಸುರಿದಿರಲಿಲ್ಲ ಎಂದು ಹೇಳಲಾಗುತ್ತಿದೆ.
ಹೊರಮಾವು, ಸಾಯಿ ಬಡಾವಣೆಗಳಿಗೆ ನೀರು ನುಗ್ಗಿ ಈ ಪ್ರದೇಶಗಳು ಕೆರೆಯಂತಾಗಿವೆ.