Sunday, December 22, 2024
Google search engine
Homeಮುಖಪುಟಭಾರತ ಐಕ್ಯತಾ ಯಾತ್ರೆಗೆ ಆನ್ ಲೈನ್ ನೋಂದಣಿ ಆರಂಭ - ಡಿ.ಕೆ.ಶಿವಕುಮಾರ್

ಭಾರತ ಐಕ್ಯತಾ ಯಾತ್ರೆಗೆ ಆನ್ ಲೈನ್ ನೋಂದಣಿ ಆರಂಭ – ಡಿ.ಕೆ.ಶಿವಕುಮಾರ್

ಸೆಪ್ಟೆಂಬರ್ 30 ರಿಂದ ಕರ್ನಾಟಕದಲ್ಲಿ ಭಾರತ ಐಕ್ಯತಾ ಯಾತ್ರೆ ಆರಂಭವಾಗಲಿದೆ. ಈಗಾಗಲೇ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಪಾದಯಾತ್ರೆ ಆರಂಭಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯ ಯಾತ್ರೆ ಸಂದರ್ಭದಲ್ಲಿ ದಸರಾ ವೇಳೆ 2 ದಿನ ವಿಶ್ರಾಂತಿ ನೀಡಲಾಗುವುದು. ರಾಜ್ಯದ ಯಾತ್ರೆಯಲ್ಲಿ ಆಸಕ್ತಿ ಇರುವವರಿಗೆ ನಡೆಯಲು ಅವಕಾಶ ಕಲ್ಪಿಸಿಕೊಡಲಿದ್ದೇವೆ. ಕೆಲವರು 1 ದಿನ ನಡೆದರೆ, ಮತ್ತೆ ಕೆಲವರು 21 ದಿನ ನಡೆಯಬಹುದು. ಹೀಗಾಗಿ ನಾವು ಪಕ್ಷಾತೀತವಾಗಿ ಎಲ್ಲರಿಗೂ ಮುಕ್ತ ಅವಕಾಶ ಮಾಡಿಕೊಡಲು ಆನ್ ಲೈನ್ ನೋಂದಣಿ ಆರಂಭಿಸಿದ್ದೇವೆ ಎಂದರು.

ಈ ಯಾತ್ರಿಗಳ ಜೊತೆ ಸ್ವಯಂ ಇಚ್ಚೆ ಯಾತ್ರಿಗಳು ಹಾಗೂ ಡಿಜಿಟಲ್ ಯಾತ್ರಿಗಳಿಗೆ ಅವಕಾಶ ಮಾಡಿಕೊಡಲು ನಿರ್ಧರಿಸಿದ್ದೇವೆ. ಹೀಗಾಗಿ ಇಂದು ಈ ಯಾತ್ರೆಗೆ ಸಂಬಂಧಿಸಿದ ಜಾಲತಾಣ ಉದ್ಘಾಟಿಸುತ್ತಿದ್ದೇವೆ ಎಂದು ಹೇಳಿದರು.

ರಾಜ್ಯದಲ್ಲಿ ಎಲ್ಲಾ ವರ್ಗಗಳ ಜನರ ಮಧ್ಯೆ ಸಾಮರಸ್ಯೆ ಕಲ್ಪಿಸಿ ನಮ್ಮ ನಾಡನ್ನು ಸರ್ವಜನಾಂಗದ ಶಾಂತಿ ತೋಟವಾಗಿ ಮಾಡಿ ದೇಶದಲ್ಲಿ ಶಾಂತಿ ಕಾಪಾಡುವುದು, ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಿಸಿ ಯುವಕರಿಗೆ ಉದ್ಯೋಗ ಕಲ್ಪಿಸಲು ಅಗತ್ಯ ವಸ್ತುಗಳ ಬಲೆ ಏರಿಕೆ ಮತ್ತು ಆದಾಯ ಕುಸಿತದ ವಿರುದ್ಧ ರಾಜ್ಯವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಲು ಉತ್ತಮ ಆಡಳಿತಕ್ಕೆ ದೇಶ ಹಾಗು ರಾಜ್ಯದ ರೈತರು, ಕಾರ್ಮಿಕರ ಬದುಕು ಸುಧಾರಿಸುವ ನಿಟ್ಟಿನಲ್ಲಿ ಈ ಯಾತ್ರೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ನಡೆಯಲಿರುವ ಭಾರತ ಐಕ್ಯತಾ ಯಾತ್ರೆ ಸಮಯದಲ್ಲಿ ಮಧ್ಯಾಹ್ನ ಬಿಡುವಿನ ವೇಳೆ ನಿರುದ್ಯೋಗಿ ಯುವಕರಿಗೆ ರಾಹುಲ್ ಗಾಂಧಿ ಅವರ ಜತೆ ಸಂವಾದ ಮಾಡಲು ಅವಕಾಶ ಮಾಡಿಕೊಡಲಾಗುವುದು. ಇವರ ಜೊತೆಗೆ ಮಹಿಳೆಯರು, ಕಾರ್ಮಿಕರು, ಸಂಘ ಸಂಸ್ಥೆಗಳು, ಎರಡು ಕಡೆ ರೈತರು, ಪರಿಶಿಷ್ಟರು, ನಾಗರಿಕ ಸಮಾಜದವರು, ಅಲ್ಪಸಂಖ್ಯಾತರು, ಶ್ರಮಿಕರಿಗೂ ಸಂವಾದಕ್ಕೆ ಒಂದೊಂದು ದಿನ ಅವಕಾಶ ಕಲ್ಪಿಸುತ್ತೇವೆ ಎಂದು ವಿವಿರಿಸಿದರು.

ರಾಹುಲ್ ಗಾಂಧಿ ಅವರು ಮೊದಲ ಬಾರಿಗೆ ರಾಜ್ಯಕ್ಕೆ ಬಂದಾಗ ಬಿಳಿಗಿರಿರಂಗನ ಬೆಟ್ಟದಲ್ಲಿ ಬುಡಕಟ್ಟು ಜನರನ್ನು ಭೇಟಿ ಮಾಡಿದ್ದರು. ಅಲ್ಲಿನ ಜನರ ಸಮಸ್ಯೆ ತಿಳಿದು ಫಾರೆಸ್ಟ್ ಸೆಟ್ಲಮೆಂಟ್ ಕಾಯ್ದೆ ತಂದರು. ಹೀಗಾಗಿ 21 ದಿನಗಳ ಕಾಲ ಮಧ್ಯಾಹ್ನ ಬಿಡುವಿನ ವೇಳೆಯಲ್ಲಿ ಒಂದೊಂದು ವರ್ಗದವರಿಗೆ ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತೇವೆ ಎಂದರು.

ಸ್ವಾಂತ್ರ್ಯ ನಡಿಗೆ ಸಮಯದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ 35 ವರ್ಷಕ್ಕಿಂತ ಕಡಿಮೆ ವಯೋಮಾನದವರು 76 ಸಾವಿರ ಜನ ಇದ್ದರು. ಹೀಗಾಗಿ ಯುವಕರಿಗೆ ಭಾರತ ಐಕ್ಯತಾ ಯಾತ್ರೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲು ನೋಂದಣಿ ಆರಂಭಿಸಿದ್ದೇವೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular