Friday, October 18, 2024
Google search engine
Homeಮುಖಪುಟವಿಧಾನಸೌಧ ವ್ಯಾಪಾರ ಸೌಧ ಆಗಿದೆ - ಪ್ರಿಯಾಂಕ್ ಖರ್ಗೆ ಲೇವಡಿ

ವಿಧಾನಸೌಧ ವ್ಯಾಪಾರ ಸೌಧ ಆಗಿದೆ – ಪ್ರಿಯಾಂಕ್ ಖರ್ಗೆ ಲೇವಡಿ

2020 ಆಗಸ್ಟ್ ನಲ್ಲಿ ಕನಕಗಿರಿ ಶಾಸಕರು ಪರಸಪ್ಪ ಅವರನ್ನು ಶಾಸಕರ ಭವನಕ್ಕೆ ಕರೆಸಿಕೊಂಡು ಅಲ್ಲಿ ಸಿಬ್ಬಂದಿ ಹೆಚ್ಚಾಗಿರುವ ಕಾರಣ ಶಾಸಕರು ತಮ್ಮ ಕಾರಿನಲ್ಲೇ ಕೂರಿಸಿಕೊಂಡು 30 ಲಕ್ಷಕ್ಕೆ ಡೀಲ್ ನಿರ್ಧರಿಸುತ್ತಾರೆ ಎಂದು ಪರಸಪ್ಪ ಅವರೇ ವಿಡಿಯೋದಲ್ಲಿ ಒಪ್ಪಿಕೊಂಡಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಡೀಲ್ ನಿಗದಿಯಾದ ನಂತರ ಮುಂಗಡವಾಗಿ 15 ಲಕ್ಷ ನೀಡುತ್ತಾರೆ. ನಾವು ಯಾವಾಗಲೂ ಹೇಳುವಂತೆ ವಿಧಾನಸೌಧ ವ್ಯಾಪಾರ ಸೌಧವಾಗಿದೆ. ಶಾಸಕರ ಭವನದಲ್ಲಿ ಡೀಲ್ ಮಾಡಿದ್ದಾರೆ ಎಂದು ಇವರಿಗೆ ನಾಚಿಕೆ ಆಗುವುದಿಲ್ಲವೇ? ಕೆಲಸ ಆಗದ ನಂತರ ಹಣ ಕೇಳಿದಾಗ ನಾನು ಹಣವನ್ನು ಸರ್ಕಾರಕ್ಕೆ ಕೊಟ್ಟಿರುವುದಾಗಿ ಕನಕಗಿರಿ ಶಾಸಕರು ಹೇಳುತ್ತಾರೆ. ಈ ಸರ್ಕಾರ ಎಂದರೆ ವಿಧಾನಸೌಧ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಶಾಸಕರು ಹಣ ವಾಪಸ್ ಮಾಡದ ಹಿನ್ನೆಲೆಯಲ್ಲಿ ಈ ಪ್ರಕರಣ ಬಹಿರಂಗವಾಗಿದೆ. ಬಿಜೆಪಿ ಶಾಸಕರುಗಳು, ಸಚಿವರುಗಳಿಗೆ ಬ್ರೋಕರ್ ಆಗಿದ್ದಾರೆ. ಬಿಜೆಪಿ ಅಂದ್ರೆ ಭ್ರಷ್ಟ ಜನತಾ ಪಕ್ಷ ಅಂತ ಹೇಳಲಾಗುತ್ತಿತ್ತು. ಈಗ ಶಾಸಕರು ಬ್ರೋಕರ್ ಜನತಾ ಪಕ್ಷವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದರು.

ಈ ಪ್ರಕರಣದಲ್ಲಿ ಇಷ್ಟೆಲ್ಲಾ ಆದರೂ ಶಾಸಕರಿಗೆ ನೋಟೀಸ್ ಹೋಗಿಲ್ಲ. ಸುಮೋಟೋ ಪ್ರಕರಣ ದಾಖಲಾಗಿಲ್ಲ. ಮುಖ್ಯಮಂತ್ರಿಗಳು ಶಾಸಕರನ್ನು ಕರೆದು ಪ್ರಶ್ನೆ ಮಾಡಿಲ್ಲ ಯಾಕೆ? ಆಗ ಗೃಹಮಂತ್ರಿಯಾಗಿದ್ದವರು ಬೊಮ್ಮಾಯಿ ಅವರೇ ಅಲ್ಲವೇ? ಎಂದು ಕೇಳಿದ್ದಾರೆ.

ಬೊಮ್ಮಾಯಿ ಅವರು ದೊಡ್ಡಬಳ್ಳಾಪುರದಲ್ಲಿ ಧೈರ್ಯ, ತಾಕತ್ತು, ಧಮ್ಮಿನ ವಿಚಾರವಾಗಿ ಮಾತನಾಡಿದರು. ನಿಮಗೆ ಧಮ್ಮಿದ್ದರೆ ಶಾಸಕರನ್ನು ಕರೆಸಿ ಪರೀಕ್ಷೆ ಬರೆದ ಯುವಕರು, ನಿರುದ್ಯೋಗಿ ಯುವಕರ ಮುಂದೆ ಈ ವಿಚಾರ ಪ್ರಸ್ತಾಪಿಸಿ. ಶಾಸಕರು ಯಾಕೆ 15 ಲಕ್ಷ ಪಡೆದರು? ಸರ್ಕಾರಿ ಹುದ್ದೆಗಳನ್ನು ಯಾಕೆ ಮಾರಾಟ ಮಾಡಿದ್ದಾರೆ ಎಂದು ಯುವಕರ ಮುಂದೆ ಹೇಳಿ. ನಿಮ್ಮ ಯೋಗ್ಯತೆಗೆ ಒಬ್ಬರಿಗೆ ಕೆಲಸ ನೀಡಲು ಆಗಿಲ್ಲ. ನೀವು ಧಮ್ಮು ತಾಕತ್ತು ಬಗ್ಗೆ ಮಾತನಾಡುತ್ತೀರಾ ಎಂದಿದ್ದಾರೆ.

ನಿಮ್ಮದು ಯಾವ ಜನಸ್ಪಂದನ, ನೀವು ಕೇವಲ ಭ್ರಷ್ಟಾಚಾರಕ್ಕೆ ಸ್ಪಂದಿಸುತ್ತೀರ, ಹೀಗಾಗಿ ನಮ್ಮ ಆಗ್ರಹ ಹೀಗಿದೆ. ಸುಮೋಟೋ ಪ್ರಕರಣ ಯಾಕೆ ದಾಖಲಿಸಿಲ್ಲ? ಸರ್ಕಾರ ಈ ವಿಚಾರವಾಘಿ ಸದನದಲ್ಲಿ ಉತ್ತರಿಸಬೇಕು. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿ ಐಪಿಎಸ್ ಜೈಲಿಗೆ ಹೋಗಿರುವುದನ್ನು ಸಾಧನೆ ಎಂದು ಹೇಳಿಕೊಳ್ಳುತ್ತಿದ್ದೀರಿ ಎಂದರು.

ಗೃಹ ಸಚಿವರು ಹಾಗೂ ಪೊಲೀಸ್ ಮಹಾನಿರ್ದೇಶಕರು ನಮ್ಮ ಬಳಿ ವಿಧಿವಿಜ್ಞಾನ ಅತ್ಯಾಧುನಿಕ ತಂತ್ರಜ್ಞಾನ ಇದ್ದು ಯಾರು ಪ್ರಾಮಾಣಿಕರು, ಯಾರು ಅಲ್ಲ ಎಂದು ನಮಗೆ ತಿಳಿಯುತ್ತದೆ. ಪ್ರಾಮಾಣಿಕರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಆನಂತರ ಮರು ಪರೀಕ್ಷೆ ಎಂದು ಹೇಳಿ ಅವರನ್ನು ಗೊಂದಲಕ್ಕೆ ಸಿಲುಕಿಸಿದ್ದೀರಿ. ಹೀಗಾಗಿ ನ್ಯಾಯಯುತವಾಗಿ ಪರೀಕ್ಷೆ ಬರೆದವರು ಹೋರಾಟ ಮಾಡುತ್ತಿದ್ದಾರೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular