ಕಾಡುಗೊಲ್ಲ ಬುಡಕಟ್ಟು ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಕರ್ನಾಟಕ ಕಾಡುಗೊಲ್ಲ ಅಸ್ಮಿತೆ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಜಿ.ಕೆ.ನಾಗಣ್ಣ ಒತ್ತಾಯಿಸಿದರು.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಡುಗೊಲ್ಲರು ಕರ್ನಾಟಕ ಪ್ರಾಂತ ಬುಡಕಟಟು ಜನಾಂಗವಾಗಿದೆ. ಕಾಡು ಮತ್ತು ಕಾಡಂಚಿನ ಪ್ರದೇಶದಲ್ಲಿ ಪ್ರತ್ಯೇಕ ಹಟ್ಟಿಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿರುವ ಕಾಡುಗೊಲ್ಲರು ಕುರಿ, ದನ ಮೇಯಿಸುವುದನ್ನೇ ಬದುಕಿನ ಮೂಲ ವೃತ್ತಿಯಾಗಿಸಿದಕೊಂಡಿದ್ದಾರೆ ಎಂದು ಹೇಳಿದರು.
ಕನ್ನಡದ ಅಪ್ಪಟ ಬುಡಕಟ್ಟ ಜನರಾದ ಕಾಡುಗೊಲ್ಲರು ತಮ್ಮದೇ ಆದ ವಿಶಿಷ್ಟ ಸಂಪ್ರದಾಯ ಆಚರಣೆಯಿಂದ ಜಗತ್ತಿನ ಸಂಸ್ಕೃತಿ ಚಿಂತಕರು, ಮಾನವ ಶಾಸ್ತ್ರಜ್ಞರ ಗಮನ ಸೆಳೆದಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ಸೇರುವ ಎಲ್ಲಾ ಲಕ್ಷಣಗಳನ್ನು ಹೊಂದಿದ್ದರೂ ಆಳುವ ಸರ್ಕಾರಗಳು ಕಾಡುಗೊಲ್ಲ ಜನಾಂಗವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಲು ಮುಂದಾಗದಿರುವುದು ವಿಷಾದನೀಯ ಎಂದರು.
ಕಾಡುಗೊಲ್ಲರ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನವೂ ನಡೆದಿದೆ. ಇದರ ಆಧಾರದ ಮೇಲೆ ಕರ್ನಾಟಕ ಸರ್ಕಾರ 2014ರಲ್ಲಿ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಆದರೂ ಕೇಂದ್ರ ಸರ್ಕಾರ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ದೂರಿದರು.
ಪಂಗಡಕ್ಕೆ ಸೇರಿಸುವ ನಿರ್ಣಯವನ್ನು ತೆಗೆದು ಕೊಳ್ಳಲಾಗಿದೆ . ಅದರ ಕಾಡುಗೊಲ್ಲ ಸಮುದಾಯವನ್ನು ಎಸ್.ಟಿ. ಪಟ್ಟಿಗೆ ಸೇರಿಸುವ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಕೇಂದ್ರ ಸರ್ಕಾರಕ್ಕೆ ಈ ಸಮುದಾಯದ ಬಗ್ಗೆ ಇರುವ ನಿರ್ಲಕ್ಷ್ಯ ಧೋರಣೆಯನ್ನು ತೂರಿಸುತ್ತದೆ ಎಂದರು.
ಕಾಡುಗೊಲ್ಲರು ವಾಸಿಸುವ ಲೋಕಸಭಾ ಮತ್ತು ವಿಧಾನ ಸಭಾ ಕ್ಷೇತ್ರಗಳನ್ನು ಪ್ರತಿನಿಧಿಸುವ ಸದಸ್ಯರು ಕಾಡುಗೊಲ್ಲ ಜನಾಂಗವನ್ನು ಪರಿಶಿಷ್ಠ ಪಂಗಡ ಪಟ್ಟಿಗೆ ಸೇರಿಸುವಂತೆ ಒಕ್ಕೂಟ ಸರ್ಕಾರದ ಗಮನ ಸೆಳೆಯಬೇಕು, ಕಾಡುಗೊಲ್ಲ ನಿಗಮಕ್ಕೆ ಅನುದಾನ ಒದಗಿಸುವ ಕೆಲಸ ಇಲ್ಲದಿದ್ದರೆ ಕಾಡುಗೊಲ್ಲರು ತಮ್ಮ ಸಾಂವಿಧಾನಿಕ ಹಕ್ಕು ಪಡೆಯಲು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಪತಿಕಾಗೋಷ್ಠಿಯಲ್ಲಿ ಹೆಚ್ ಎಂ ಟಿ ರಮೇಶ್, ಸಂಚಾಲಕ ಶ್ರೀನಿವಾಸ್, ಚಿತ್ತರಾಜು ಜಂಗಮರಳ್ಳಿ ಮತ್ತಿತರು ಉಪಸ್ಥಿತರಿದ್ದರು.