Monday, December 23, 2024
Google search engine
Homeಮುಖಪುಟಲಂಚ ತಿಂದಿದ್ದು ಹೇಳಿದರೆ ಅಪರಾಧ - ಸರ್ಕಾರದ ವಿರುದ್ಧ ಸಿದ್ದು ಕಿಡಿ

ಲಂಚ ತಿಂದಿದ್ದು ಹೇಳಿದರೆ ಅಪರಾಧ – ಸರ್ಕಾರದ ವಿರುದ್ಧ ಸಿದ್ದು ಕಿಡಿ

ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ. ಲಂಚ ತಿಂದಿದ್ದನ್ನು ಹೇಳಿದರೆ ಅಪರಾಧ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ? ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬ ಜೈಲು ಕಟ್ಟಿಸುತ್ತೀರಾ? ಜನ ಬಂಡೆದಿದ್ದಾರೆ ಎಚ್ಚರ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಲಂಚಗುಳಿತನದ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ. ತಾಕತ್ತಿದ್ದರೆ ನಮ್ಮನೂ ಬಂಧಿಸಿ. ನನ್ನ ಮತ್ತು ಡಿ.ಕೆ.ಶಿವಕುಮಾರ್ ಬಗ್ಗೆ ಪೋಸ್ಟರ್ ಅಂಟಿಸಿದ್ದರಲ್ಲಾ, ಅದರ ಬಗ್ಗೆ ಮುಖ್ಯಮಂತ್ರಿಗಳು ಯಾಕೆ ಮೌನವಾಗಿದ್ದಾರೆ? ಪೊಲೀಸರ ಕಣ್ಣು ಯಾಕೆ ಕುರುಡಾಗಿದೆ ಎಂದು ಕೇಳಿದ್ದಾರೆ.

ಬಿಜೆಪಿ ಗೆಲುವಿನ ಸೂತ್ರವೇ ಸುಳ್ಳು ಮಾಹಿತಿಗಳ ಅಪಪ್ರಚಾರ, ವಿರೋಧಿಗಳ ಚಾರಿತ್ರ್ಯಹನನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ. ಸಾಮಾಜಿಕ ಮಾಧ್ಯಮವೂ ಸೇರಿದಂತೆ ಹೊಸ ತಂತ್ರಜ್ಞಾನವನ್ನು ಬಿಜೆಪಿಯಷ್ಟು ದುರುಪಯೋಗಪಡಿಸಿಕೊಂಡ ರಾಜಕೀಯ ಪಕ್ಷ ಜಗತ್ತಿನಲ್ಲಿ ಇನ್ನೊಂದಿಲ್ಲ ಎಂದಿದ್ದಾರೆ.

ಬಿಜೆಪಿಯ ಅಧಿಕೃತ ಸೋಷಿಯಲ್ ಮೀಡಿಯಾಗಳಲ್ಲಿಯೇ ನನ್ನ ವಿರುದ್ಧದ ಕುತ್ಸಿತ ಹೇಳಿಕೆಗಳು, ವಿರೂಪಗೊಳಿಸಿದ ಪೋಟೋಗಳ ವಿವರ ಕೊಡುತ್ತೇನೆ. ಅವರನ್ನು ಬಂಧಿಸಿ. ನಾನು ಅಧಿಕಾರದಲ್ಲಿದ್ದಾಗಲೇ ಅಂತಹವರ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿಲ್ಲ. ಇದು ನಾನು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕೊಟ್ಟ ಗೌರವ ಎಂದು ಹೇಳಿದ್ದಾರೆ.

ರಾಜಕೀಯ ವ್ಯವಸ್ಥೆಯಲ್ಲಿ ಇಂತಹ ಆರೋಪ-ಪ್ರತ್ಯಾರೋಪ ಸಹಜ ವಿದ್ಯಮಾನವಾದರೂ ಇದನ್ನು ಇಷ್ಟೊಂದು ಕೀಳು ಮಟ್ಟಕ್ಕೆ ತಂದು ನಿಲ್ಲಿಸಿದ ಕೀರ್ತಿ ಭಾರತೀಯ ಜನತಾ ಪಕ್ಷಕ್ಕೆ ಸಲ್ಲುತ್ತದೆ ಎಂದು ಕುಟುಕಿದ್ದಾರೆ.

ಏನು ಮುಖ್ಯಮಂತ್ರಿಗಳೇ ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ಟಿರಿ, ಈಗ ಯಾರೋ ನಿಮಗೆ ಚುಚ್ಚಿದಕ್ಕೆ ನೋವಾಯ್ತಾ? ಎಂದು ಪ್ರಶ್ನಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular