ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ.
ಪಕ್ಷದ ಅಧ್ಯಕ್ಷ ಚುನಾವಣೆಗೆ ಔಪಚಾರಿಕವಾಗಿ ನಾಮಪತ್ರ ಸಲ್ಲಿಸುವ ಮೊದಲು ಅಶೋಕ್ ಗೆಹ್ಲೋಟ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಸೂಚಿಸಲಾಗಿದೆ.
ಗೆಹ್ಲೋಟ್ ಅವರ ನಿಕಟವರ್ತಿಗಳೆಂದು ಪರಿಗಣಿಸಲಾದ ಪಕ್ಷದ ಕೆಲವು ಶಾಸಕರು ಸಚಿನ್ ಪೈಲಟ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದು ಈ ಕಾರಣಕ್ಕಾಗಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯುವ ನಿರ್ಧಾರಕ್ಕೆ ಬಂದಿದೆ.
ರಾಜಸ್ಥಾನದ ಗ್ರಾಮೀಣಾಭಿವೃದ್ಧಿ ಸಚಿವ ರಾಜೇಂದ್ರ ಸಿಂಗ್ ಗೂಡಾ ಕೂಡ ಇದ್ದಾರೆ. ಬಿಎಸ್.ಪಿ-ಕಾಂಗ್ರೆಸ್ ಶಾಸಕ ವಾಜಿಬ್ ಅಲಿ ಕೂಡ ಸಚಿನ್ ಪೈಲಟ್ ಬೆಂಬಲಕ್ಕೆ ನಿಂತಿದ್ದಾರೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಸಂಸದ ಶಶಿ ತರೂರು ಅವರು ಅಕ್ಟೋಬರ್ 17ರಂದು ಚುನಾವಣೆಗೆ ಅರ್ಜಿ ಸಲ್ಲಿಸಲು ವಾರದ ಅವಧಿಯಲ್ಲಿ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳಲು ಉತ್ಸುಕರಾಗಿದ್ದು ಶೀಘ್ರವೇ ನಾಮಪತ್ರಗಳನ್ನು ಸಲ್ಲಿಸಲಿದ್ದಾರೆ. ಮತಗಳ ಎಣಿಕೆಯನ್ನು ಅಕ್ಟೋಬರ್ 19ರಂದು ನಿಗದಿಪಡಿಸಲಾಗಿದೆ. ಪಿಸಿಸಿ ಪ್ರತಿನಿಧಿಗಳು ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದೆ.