ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ತೀರ್ಮಾನಿಸಿದ್ದಾರೆ.
ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದು ಅವರ ವೈಯಕ್ತಿಕ ತೀರ್ಮಾನವಾಗಿದ್ದು ಗಾಂಧೀ ಕುಟುಂಬದಿಂದ ಅವರಿಗೆ ಯಾವುದೇ ಸೂಚನೆ ಬಂದಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ.
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಕಣಕ್ಕಿಳಿಸುವುದು ಗಾಂಧಿ ಕುಟುಂಬದ ತೀರ್ಮಾನವಾಗಿತ್ತು.
ಆದರೆ ರಾಜಸ್ಥಾನಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಗೆ ನಡೆಯಬೇಕಾಗಿದ್ದ ಶಾಸಕಾಂಗ ಪಕ್ಷದ ಸಭೆಯನ್ನು ದಿಕ್ಕರಿಸಿ ಶಾಸಕರು ಮತ್ತೊಂದು ಸಭೆ ನಡೆಸಿ, ಗೆಹ್ಲೋಟ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದರ ವಿರುದ್ಧ ತಮ್ಮ ಅಸಮಧಾನ ಹೊರಹಾಕಿದ್ದರು. ಹೀಗಾಗಿ ಗೆಹ್ಲೋಟ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ಹೀಗಾಗಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಸೆಪ್ಟೆಂಬರ್ 30ರಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.