ದೇಶ ವಿಭಜನೆಗೆ ಕಾಂಗ್ರೆಸ್ಸೇ ಕಾರಣ ಎಂದು ಹೇಳುವ ಭಾರತೀಯ ಜನತಾ ಪಕ್ಷ ಸುಳ್ಳಿನ ಕಾರ್ಖಾನೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಗುಂಡ್ಲಪೇಟೆಯಲ್ಲಿ ಸಂಚರಿಸುತ್ತಿರುವ ಭಾರತ ಐಕ್ಯತಾ ಯಾತ್ರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಬಿಜೆಪಿ ಮುಖಂಡರು ನೈತಿಕತೆ ಕಳೆದುಕೊಂಡಿದ್ದಾರೆ ಎಂದರು.
ಮಾಜಿ ಪ್ರಧಾನ ದಿವಂಗತ ಜವಾಹರಲಾಲ್ ನೆಹರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ 9 ವರ್ಷಗಳ ಕಾಲ ಜೈಲುವಾಸ ಅನುಭವಿಸಿದರು. ಜೈಲುವಾಸ ಅನುಭವಿಸಿದ್ದು ಸ್ವಂತ ಕಾರ್ಯಕ್ಕಲ್ಲ ಎಂಬುದನ್ನು ಬಿಜೆಪಿ ಮುಖಂಡರು ಅರ್ಥ ಮಾಡಿಕೊಳ್ಳಬೇಕು ಎಂದರು.
ನೆಹರು ಕುಟುಂಬ ಈ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದೆ. ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರನ್ನು ಕೊಲ್ಲಲಾಯಿತು. ಸೋನಿಯಾಗಾಂಧಿ ಅವರು ಪ್ರಧಾನಿ ಹುದ್ದೆಯನ್ನು ನಿರಾಕರಿಸಿದರು. ಇದು ಸೋನಿಯಾ ಅವರ ತ್ಯಾಗಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.