ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ರಾಜ್ಯಸಭೆಯ ಪ್ರತಿಪಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜಿನಾಮೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಗಾಂಧಿ ಕುಟುಂಬಕ್ಕೆ ಹತ್ತಿರುವಾಗಿದ್ದಾರೆ. ಹೀಗಾಗಿ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಜಿ23 ಗುಂಪಿನ ನಾಯಕರಾದ ಅಶೋಕ್ ಗೆಹ್ಲೋಟ್, ಸಲ್ಮಾನ್ ಖುರ್ಷಿದ್, ದೀಪೇಂದರ್ ಹೂಡ, ದಿಗ್ವಿಜಯ ಸಿಂಗ್, ಮನೀಶ್ ತಿವಾರಿ, ಪೃಥ್ವಿರಾಜ್ ಚೌಹಾಣ್ ಸೇರಿದಂತೆ 30ಕ್ಕೂಹೆಚ್ಚು ಕಾಂಗ್ರೆಸ್ ನಾಯಕರು ಖರ್ಗೆ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ಅಕ್ಟೋಬರ್ 17ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19ಕ್ಕೆ ಮತ ಎಣಿಕೆ ಕಾರ್ಯ ನಡೆದು ಫಲಿತಾಂಶ ಹೊರಬೀಳಲಿದೆ.