ಬಿಜೆಪಿ ಉಪಾಧ್ಯಕ್ಷ ಬಿ.ವೈ.ರಾಘವೇಂದ್ರ ಅವರ ಭ್ರಷ್ಟಾಚಾರದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೈಲು ಸೇರುವಂತೆ ಆಯಿತು ಎಂದು ಸಂಸದ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಒಳ್ಳೆಯವರು. ಆದರೆ ಮಗನ ಮಾತು ಕೇಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕಾಯಿತು ಎಂದು ಯತ್ನಾಳ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಯಡಿಯೂರಪ್ಪ ರಾಜಿನಾಮೆಗೆ ಅವರ ಪುತ್ರ ವಿಜಯೇಂದ್ರ ಕಾರಣ. ಇದರ ಜೊತೆಗೆ ವಿಜಯೇಂದ್ರ ಅವರ ಭ್ರಷ್ಟಾಚಾರದಿಂದ ಪಕ್ಷಕ್ಕೂ ಡ್ಯಾಮೇಜ್ ಆಗಿದೆ ಎಂದು ಆರೋಪಿಸಿದ್ದಾರೆ.
ಮಗನ ಮಾತು ಕೇಳಿದ್ದರಿಂದ ಯಡಿಯೂರಪ್ಪ ಅಧಿಕಾರ ಕಳೆದುಕೊಳ್ಳಬೇಕಾಯಿತು ಮತ್ತು ಬಿಜೆಪಿಗೆ ಕೆಟ್ಟ ಹೆಸರು ಬರುವಂತೆ ಆಯಿತು ಎಂದು ತಿಳಿಸಿದ್ದಾರೆ.
ಬಿ.ವೈ.ರಾಘವೇಂದ್ರ ವಿರುದ್ಧ ವಾಗ್ದಾಳಿ ನಡೆಸಿರುವ ಯತ್ನಾಳ್ ಪಕ್ಷಕ್ಕೆ ಮುಜುಗರವಾಗುವಂತಹ ಹೇಳಿಕೆ ನೀಡಿದ್ದಾರೆ. ಇದು ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸಿದೆ ಎಂದು ಹೇಳಲಾಗುತ್ತಿದೆ.