ಹೊನ್ನಾವರದ ಪರೇಶ್ ಮೆಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿಯ ಮುಖಕ್ಕೆ ಬಡಿದ ತಪರಾಕಿಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ ಅವರಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೆಸ್ತನಂತಹ ಅಮಾಯಕ ಯುವಕರ ರಕ್ತ ಇದೆ ಎಂದು ತಿಳಿಸಿದ್ದಾರೆ.
ಬಿಜೆಪಿ ನಾಯಕರೇ ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೆಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದು ಆರೋಪಿಸಿದ್ದಾರೆ.