Monday, December 23, 2024
Google search engine
Homeಮುಖಪುಟಜಮ್ಮುವಿನಲ್ಲಿ ಪೊಲೀಸ್ ಮಹಾನಿರ್ದೇಶಕ ಹೇಮಂತ್ ಕುಮಾರ ಲೋಹಿಯಾ ಹತ್ಯೆ

ಜಮ್ಮುವಿನಲ್ಲಿ ಪೊಲೀಸ್ ಮಹಾನಿರ್ದೇಶಕ ಹೇಮಂತ್ ಕುಮಾರ ಲೋಹಿಯಾ ಹತ್ಯೆ

ಜಮ್ಮುವಿನ ಉದಯವಾಲಾದಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ಹೇಮಂತ್ ಕುಮಾರ್ ಲೋಹಿಯಾ ಅವರನ್ನು ಅವರ ನಿವಾಸದಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲೋಹಿಯಾ ಹತ್ಯೆ ಭಯೋತ್ಪಾದಕರ ಕೃತ್ಯ ಎಂಬುದನ್ನು ಪೊಲೀಸರು ಅಲ್ಲಗಳೆದಿದ್ದಾರೆ.

ಕೇಂದ್ರಾಡಳಿತ ಪ್ರದೇಶಕ್ಕೆ ಮೂರು ದಿನಗಳ ಭೇಟಿಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮುವಿಗೆ ಆಗಮಿಸಿದ ಕೆಲವೇ ಗಂಟೆಗಳ ನಂತರ ಸೋಮವಾರ ರಾತ್ರಿ ಲೋಹಿಯಾ ಮೃತದೇಹ ಪತ್ತೆಯಾಗಿದೆ.

ರಾಂಬನ್ ನಿವಾಸಿ ಯಾಸಿರ್ ಅಹ್ಮದ್ ಪ್ರಮುಖ ಆರೋಪಿ ಎಂಬುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಘಟನಾ ಸ್ಥಳದಿಂದ ಸಂಗ್ರಹಿಸಲಾದ ಕೆಲವು ಸಿಸಿಟಿವಿ ದೃಶ್ಯಾವಳಿಗಳು ಈ ಕೃತ್ಯದ ನಂತರ ಶಂಕಿತ ಆರೋಪಿ ಓಡಿಹೋಗುವುದನ್ನು ಸಹ ತೋರಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಯಾಸಿರ್ ಸುಮಾರು 6 ತಿಂಗಳಿನಿಂದ ಮನೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಆತನು ಸಾಕಷ್ಟು ಆಕ್ರಮಣಕಾರಿಯಾಗಿದ್ದ ಮತ್ತು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಪ್ರಾಥಮಿಕ ತನಿಖೆಯ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಯಾರಿಗಾದರೂ ಯಾಸಿರ್ ಬಗ್ಗೆ ಯಾವುದೇ ಮಾಹಿತಿ ದೊರೆತರೆ ಅಥವಾ ಆತ ಎಲ್ಲಿಯಾದರೂ ಕಂಡುಬಂದರೆ ಮಾಹಿತಿಯನ್ನು ಪೊಲೀಸರೊಂದಿಗೆ ಹಂಚಿಕೊಳ್ಳಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಲೋಹಿಯಾ ಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ ಇದರಲ್ಲಿ ಭಯೋತ್ಪಾದಕರ ಕೃತ್ಯ ಎಂಬುದು ಸ್ಪಷ್ಟವಾಗಿಲ್ಲ. ಹೀಗಾಗಿ ತನಿಖೆ ಮುಂದುವರೆದಿದೆ. ಮನೆಯ ಸಹಾಯಕನ ಮಾನಸಿಕ ಸ್ಥಿತಿಯನ್ನು ಪ್ರತಿಬಿಂಬಿಸುವ ಕೆಲವು ಸಾಕ್ಷ್ಯಗಳ ಜೊತೆಗೆ ಆಯುಧವನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular