ತುಮಕೂರು ನಗರದ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಎಸ್.ಎಸ್.ಬಾರ್ ಸಿಬ್ಬಂದಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಮುಬಾರಕ್ ಎಂದು ಗುರುತಿಸಲಾಗಿದ್ದು ಆತನನ್ನು ಹತ್ಯೆ ಮಾಡಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಳೆದ ರಾತ್ರಿ ಮುಬಾರಕ್ ಅವರು ಬಾರ್ ಗೆ ಕುಡಿಯಲು ಹೋಗಿದ್ದರು. ಈ ಸಂದರ್ಭದಲ್ಲಿ ಬಾರ್ ಸಿಬ್ಬಂದಿಯೊಂದಿಗೆ ಜಗಳವಾಗಿದೆ. ಮಾತಿಗೆ ಮಾತು ಬೆಳೆದು ಬಾರ್ ಸಿಬ್ಬಂದಿ ಮುಬಾರಕ್ ನನ್ನು ಮನಬಂದಂತೆ ಥಳಿಸಿ, ಹರಿತವಾದ ಆಯುಧಗಳನ್ನು ಬಳಸಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕೊಲೆಯಾದ ಮುಬಾರಕ್ ನ ದೇಹವನ್ನು ಖಾಸಗಿ ಬಸ್ ನಿಲ್ದಾಣದಲ್ಲಿ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.