Thursday, November 21, 2024
Google search engine
Homeಮುಖಪುಟಪರಿಶಿಷ್ಟರ ಮೀಸಲಾತಿ ಹೆಚ್ಚಿಸಲು ಒಮ್ಮತದ ತೀರ್ಮಾನ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪರಿಶಿಷ್ಟರ ಮೀಸಲಾತಿ ಹೆಚ್ಚಿಸಲು ಒಮ್ಮತದ ತೀರ್ಮಾನ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಸಂಬಂಧಿಸಿದಂತೆ ಸರ್ವ ಪಕ್ಷ ಸಭೆಯಲ್ಲಿ ಕಾನೂನು ಮತ್ತು ಸಂವಿಧಾನಾತ್ಮಕವಾಗಿ ಮೀಸಲಾತಿ ಹೆಚ್ಚಿಸುವ ಕುರಿತು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಪ್ರಕಾರ ಎಸ್.ಸಿ ಸಮುದಾಯಕ್ಕೆ ಶೇ.15 ರಿಂದ ಶೇ.17 ‌ಹಾಗೂ ಎಸ್.ಟಿ ಸಮುದಾಯಕ್ಕೆ ಶೇ.3 ರಿಂದ ಶೇ.7 ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular