ದೇಶದ ಸಾಮಾಜಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕನ್ಯಾಕುಮಾರಿಯಿಂದ ಜಮ್ಮುವರೆಗೆ ಎಐಸಿಸಿ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ತುಮಕೂರು ಜಿಲ್ಲೆಗೆ ಆಗಮಿಸಿದ್ದು ಕೆಪಿಸಿಸಿ ಮಾಜಿ ಅಧ್ಯಕ್ಷ ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಯಾತ್ರೆಯನ್ನು ಅದ್ದೂರಿಯಾಗಿ ಬರಮಾಡಿಕೊಂಡರು.
ರಾಹುಲ್ ನೇತೃತ್ವದ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಹಲವು ಮಂದಿ ಯುವಕರು ಹೆಜ್ಜೆಹಾಕಿ ಸಾಥ್ ನೀಡಿದರು. ಅದರಲ್ಲಿ ಶಿಡ್ಲಘಟ್ಟದ ಯುವಕ ತನ್ನ ಕೊರಳ ತುಂಬ ಪದಕಗಳನ್ನು ಹಾಕಿಕೊಂಡು ರಾಹುಲ್ ಗಾಂಧಿ ಜೊತೆ ನಡೆದರು ಸಂಭ್ರಮಪಟ್ಟರು.
ದಲಿತ ಸಂಘರ್ಷ ಸಮಿತಿಯಿಂದ ರಾಹುಲ್ ಯಾತ್ರೆಯಲ್ಲಿ ಭಾಗಿಯಾಗುವ ಮೂಲಕ ಮುರುಳಿ ಕುಂದೂರು ಗಮನ ಸೆಳೆದರು. ರಾಹುಲ್ ಗಾಂಧಿ ಅವರಿಗೆ ಬುದ್ದ ಮೂರ್ತಿಯನ್ನು ಕೊಡುಗೆ ನೀಡಲಾಯಿತು. ಸ್ಥಳೀಯ ಸಮಸ್ಯೆ ಮತ್ತು ದಲಿತರ ಮೇಲಿನ ದೌರ್ಜನ್ಯದ ಬಗ್ಗೆ ರಾಹುಲ್ ಗಾಂಧಿಯೊಂದಿಗೆ ಚರ್ಚಿಸಿದರು.
ಭಾರತ್ ಜೋಡೋ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರನ್ನು ಪ್ರೊಫೆಸರ್ ಬಿ.ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಕಲ್ಪತರು ನಾಡು ತುಮಕೂರು ಜಿಲ್ಲೆಗೆ ಪ್ರೀತಿ ಮತ್ತು ಆದರದಿಂದ ಸ್ವಾಗತಿಸಿ ರಾಹುಲ್ ಅವರೊಂದಿಗೆ ಹೆಜ್ಜೆ ಹಾಕಿದ ಸುಂದರ ಕ್ಷಣಗಳನ್ನು ಮುರಳಿ ಕುಂದೂರು ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.
ಯಾತ್ರೆಯಲ್ಲಿ ದಲಿತ ಮುಖಂಡರು, ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಯುವತಿಯರು ಪಾಲ್ಗೊಂಡಿದ್ದಾರೆ. ಯಾತ್ರೆಗೆ ಜನಸಾಗರ ಸೇರುತ್ತಿದ್ದು ಕಾಂಗ್ರೆಸ್ ಮುಖಂಡರರು ಅಚ್ಚರಿ ವ್ಯಕ್ತಪಡಿಸಿದ್ದಾರೆ.