Saturday, October 19, 2024
Google search engine
Homeಜಿಲ್ಲೆತುಮಕೂರು - ಶೀಲ ಶಂಕಿಸಿ ಪತ್ನಿಯನ್ನೇ ಕೊಂದ ಪತಿ

ತುಮಕೂರು – ಶೀಲ ಶಂಕಿಸಿ ಪತ್ನಿಯನ್ನೇ ಕೊಂದ ಪತಿ

ಪತಿಯೊಬ್ಬ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಬೇಡತ್ತೂರು ಗ್ರಾಮದ ಪುಷ್ಪಲತಾ ಎಂದು ಗುರುತಿಸಲಾಗಿದೆ. ಪತ್ನಿಯನ್ನೇ ಕೊಲೆ ಮಾಡಿದ ಆರೋಪಿ ರಾಮಾಂಜನೇಯ ತಲೆ ಮರೆಸಿಕೊಂಡಿದ್ದಾನೆ.

ರಾಮಾಂಜನೇಯ ಮತ್ತು ಪುಷ್ಪಲತಾ ನಡುವೆ ವಿವಾಹವಾಗಿ 13 ವರ್ಷ ವಯಸ್ಸಾಗಿತ್ತು. ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ.

ಪುಷ್ಪಲತಾ ಮತ್ತು ರಾಮಾಂಜನೇಯ ನಡುವೆ ಆಗಾಗ ಕಲಹ ನಡೆಯುತ್ತಿತ್ತು ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular