ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಭಾರತ ಜೋಡೋ ಯಾತ್ರೆಯ ನೇತೃತ್ವ ವಹಿಸಿರುವ ಎಐಸಿಸಿ ನಾಯಕ ರಾಹುಲ್ ಗಾಂಧೀ ಬಿಜೆಪಿ ಸರ್ಕಾರ 40 ಪರ್ಸೆಂಟ್ ಸರ್ಕಾರ ಎಂದು ಆರೋಪಿಸಿದರು.
ರಾಜ್ಯದ ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಶೇ.40 ಪರ್ಸೆಂಟ್ ಕಮಿಷನ್ ನೀಡಿ ಕರ್ನಾಟಕದಲ್ಲಿ ಏನನ್ನು ಬೇಕಾದರೂ ಖರೀದಿಸಬಹುದು ಎಂದು ವ್ಯಂಗ್ಯವಾಡಿದರು.
ಕರ್ನಾಟಕದಲ್ಲಿ ಉದ್ಯೋಗವನ್ನು ಮಾರಿಕೊಳ್ಳುವ ಸಾಕಷ್ಟು ಹಗರಣಗಳು ನಡೆದಿವೆ. ಇತ್ತೀಚಿನ ಪಿಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ಹಗರಣಗಳು ಸರ್ಕಾರವು ಹಣಕ್ಕಾಗಿ ಉದ್ಯೋಗವನ್ನು ಮಾರುತ್ತದೆ ಎಂದು ತೋರಿಸಿದೆ ಎಂದು ಟೀಕಿಸಿದರು.
ಎಲ್.ಪಿಜಿ ಬೆಲೆ ಏರಿಕೆ ಬಗ್ಗೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ 2004ರ ಮೊದಲು ಪ್ರಸ್ತುತ ಪ್ರಧಾನಿ ದೇಶೀಯ ಅನಿಲ ಬೆಲೆ ಏರಿಕೆಯಿಂದ ತಾಯಂದಿರು ಮತ್ತು ಸಹೋದರಿಯರ ಮೇಲೆ ಹೇಗೆ ಪರಿಣಾಮ ಬೀರಿತು ಎಂಬ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಈಗ ಎಲ್.ಪಿಜಿ ಸಿಲಿಂಡರ್ ಬೆಲೆ 400 ರೂಗಳಿಂದ 1050ರೂಗಳಿಗೆ ಏರಿಕೆಯಾಗಿದೆ. ಅವರು ಈಗ ಏನು ಮಾಡುತ್ತಿದ್ದಾರೆ ಎಂದು ಕೇಳುತ್ತಾರೆಯೇ ಎಂದು ಗಾಂಧಿ ಪ್ರಶ್ನಿಸಿದರು.
ಕರ್ನಾಟಕ ಕಾಂಗ್ರೆಸ್ ಮೂಲಗಳ ಪ್ರಕಾರ ಬಳ್ಳಾರಿಯಲ್ಲಿ ಶನಿವಾರ ನಡೆದ ಭಾರತ್ ಜೋಡೋ ರ್ಯಾಲಿಯಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು ಎಂದು ಹೇಳಲಾಗಿದೆ.
ಕೋಮುಗಲಭೇ ಮತ್ತು ಸರಕುಗಳ ಬೆಲೆ ಏರಿಕೆಗೆ ಕೇಂದ್ರವೇ ಕಾರಣ. ಬಿಜೆಪಿ ಮತ್ತು ಆರ್.ಎಸ್.ಎಸ್ ಸಿದ್ದಾಂತಗಳು ದೇಶದಲ್ಲಿ ಹಿಂಸಾಚಾಋವನ್ನು ಸೃಷ್ಟಿಸುತ್ತವೆ ಎಂದು ರಾಹುಲ್ ಗಾಂಧಿ ಶನಿವಾರ ಆರೋಪಿಸಿದರು.
ಬಿಜೆಪಿ ಮಾಡುತ್ತಿರುವುದು ರಾಷ್ಟ್ರೀಯತೆ ಅಲ್ಲ. ಆದರೆ ಅದನ್ನು ರಾಷ್ಟ್ರೀಯತೆಯ ವಿರೋಧಿ ಎಂದು ಹೇಳಿದರು. ದೇಶದಲ್ಲಿ ಕಳೆದ 8 ವರ್ಷಗಳಲ್ಲಿ ಎಸ್.ಸಿ/ಎಸ್.ಟಿ ಮೇಲಿನ ದೌರ್ಜನ್ಯಗಳು ಶೇ.50ರಷ್ಟು ಹೆಚ್ಚಾಗಿದೆ ಎಂದು ದೂರಿದರು. ಸಾಮಾನ್ಯ ಜನರು ಮತ್ತು ಯುವಕರು ನಿರುದ್ಯೋಗ ಮತ್ತು ಬೆಲೆ ಏರಿಕೆಯ ನಡುವೆ ಸಿಲುಕಿದ್ದಾರೆ ಎಂದು ತಿಳಿಸಿದರು.
ಭಾರತ್ ಜೋಡೋ ಯಾತ್ರೆ 38ನೇ ದಿನಕ್ಕೆ ಕಾಲಿಟ್ಟಿದ್ದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಭಾಗೇಲ್ ಮತ್ತು ಕಾಂಗ್ರೆಸ್ ಅಧ್ಯಕ್ಷೀಯ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಯಾತ್ರೆಯಲ್ಲಿ ಭಾಗಿಯಾಗಿ ಬಿಜೆಪಿ ವಿರುದ್ಧ ವಾಗ್ಪ್ರಹಾರ ನಡೆಸಿದರು.