Saturday, October 19, 2024
Google search engine
Homeಮುಖಪುಟಲಾಲ್ ಭಾಗ್ - ಸಿದ್ದಾಪುರದ ಜಮೀನುಗಳ ಕುರಿತು ಬಿಜೆಪಿಯಿಂದ ಸುಳ್ಳು ಮಾಹಿತಿ ಬಿಡುಗಡೆ

ಲಾಲ್ ಭಾಗ್ – ಸಿದ್ದಾಪುರದ ಜಮೀನುಗಳ ಕುರಿತು ಬಿಜೆಪಿಯಿಂದ ಸುಳ್ಳು ಮಾಹಿತಿ ಬಿಡುಗಡೆ

ಲಾಲ್‍ಭಾಗ್ ಸಿದ್ಧಾಪುರದ ಜಮೀನುಗಳ ಕುರಿತು ಸುಳ್ಳು ಮಾಹಿತಿಯನ್ನು ಬಿಡುಗಡೆ ಮಾಡಿರುವವರ ಕುರಿತು ಸರ್ಕಾರ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಜೊತೆಗೆ 2008 ರಿಂದ ಇದುವರೆಗೆ ಬೆಂಗಳೂರು ಮತ್ತು ರಾಜ್ಯದ ವಿವಿಧ ನಗರಗಳಲ್ಲಿ ಮಾಡಿರುವ ಭೂ ಉಪಯೋಗ ಬದಲಾವಣೆಯ ಪ್ರತಿ ಪ್ರಕರಣದ ಮಾಹಿತಿಯನ್ನೂ ಕೂಡಲೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಜನಪ್ರಿಯತೆಯನ್ನು ಸಹಿಸದ ಬಿಜೆಪಿಯವರಿಗೆ ಮೆದುಳು ಮತ್ತು ನಾಲಿಗೆಯ ಮಧ್ಯದ ಸಂಪರ್ಕವು ಸಂಪೂರ್ಣ ಕಡಿದು ಹೋಗಿದೆ. ಅದರಲ್ಲೂ ವಿಶೇಷವಾಗಿ ನನ್ನನ್ನು ಗುರಿಯಾಗಿರಿಸಿಕೊಂಡು ಅಪಪ್ರಚಾರ ಪ್ರಾರಂಭಿಸಿದ್ದಾರೆ ಎಂದು ಹೇಳಿದರು.

ಅದರ ಭಾಗವಾಗಿಯೆ ಕಳೆದ ವಾರ ಬಿಜೆಪಿಯ ಸುಳ್ಳಿನ ಮರಿ ಯಂತ್ರವೊಂದು ಲೋಕಾಯುಕ್ತಕ್ಕೆ ಅರ್ಜಿ ಸಲ್ಲಿಸಿದೆಯೆಂದು ಕೆಲವು ಮಾಧ್ಯಮಗಳು ಅದಕ್ಕೆ ಭರಪೂರ ಪ್ರಚಾರ ಕೊಟ್ಟವು ಎಂದರು.

ಚುನಾವಣೆ ಹತ್ತಿರಕ್ಕೆ ಬಂದಂತೆಲ್ಲ ಬಿಜೆಪಿಯ ಸುಳ್ಳಿನ ಅಭಿಯಾನ ತೀವ್ರಗೊಳ್ಳುತ್ತದೆ. ಆದ್ದರಿಂದ ಜನರು ಮೆದುಳು ಮತ್ತು ಹೃದಯ ಎರಡನ್ನೂ ಕಳೆದುಕೊಂಡಿರುವ ಬಿಜೆಪಿಯ ಸುಳ್ಳಿನ ಯಂತ್ರಗಳು ಹರಿಯ ಬಿಡುವ ಮಾತುಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕೆಂದು ಕೋರಿದ್ದಾರೆ.

ಕಳೆದ ವಾರ ನಾನು ಪಾದಯಾತ್ರೆಯಲ್ಲಿದ್ದಾಗ ಬಿಜೆಪಿಯವರು ಬಿಡುಗಡೆ ಮಾಡಲಾದ ಮಾಹಿತಿ ಇದು; ಲಾಲ್‍ಭಾಗ್ ಸಿದ್ಧಾಪುರ ಗ್ರಾಮದ ಸರ್ವೆನಂ 27/1, 28/4, 5,6 ರಲ್ಲಿನ 2 ಎಕರೆ 39.5 ಗುಂಟೆ ಜಮೀನನ್ನು ಸಿದ್ದರಾಮಯ್ಯನವರು ಡಿನೋಟಿಫಿಕೇಷನ್ ಮಾಡಿದ್ದಾರೆ, ರೀಡೂ ಮಾಡಿದ್ದಾರೆ ಎಂದು ಲೋಕಾಯುಕ್ತಕ್ಕೆ ದೂರು ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.

ಹಾಗಿದ್ದರೆ ವಾಸ್ತವ ಸಂಗತಿ ಏನು? ಬಿಡಿಎನಿಂದ ನಾನು ಪಡೆದುಕೊಂಡ ಮಾಹಿತಿ ಪ್ರಕಾರ, ಈ ಜಮೀನುಗಳನ್ನು 1948 ರಲ್ಲಿ ಕನಕನಪಾಳ್ಯ 8 ನೇ ಬ್ಲಾಕ್‍ಗೆಂದು ಭೂ ಸ್ವಾಧೀನಪಡಿಸಿಕೊಂಡು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಆದರೆ ಯಾವ ಕಾರಣದಿಂದಲೊ ಏನೊ ಸದರಿ ಜಮೀನುಗಳನ್ನು ಭೂಸ್ವಾಧೀನದಿಂದ ಕೈ ಬಿಟ್ಟು 11/2/1954 ಮತ್ತು 28/12/1954 ರ ದಿನಾಂಕಗಳಂದು ‘ದಿ ಮೈಸೂರು ಗೆಜೆಟ್’ ನಲ್ಲಿ ಪ್ರಕಟವಾಗಿದೆಯೆಂಬ ಮಾಹಿತಿ ಇದೆ.

ಬಿಜೆಪಿಯವರಿಗೆ ಈ ಎಲ್ಲ ವಾಸ್ತವಾಂಶಗಳು ಗೊತ್ತಿದ್ದರೂ ಸಹ ಸುಳ್ಳಿನ ದುರ್ಗಂಧದ ವಿಷವನ್ನು ಜನರ ಮನಸ್ಸಿನಲ್ಲಿ ತುಂಬಲು ಪ್ರಯತ್ನಿಸುತ್ತಿದ್ದಾರೆ. 1954 ರಲ್ಲೆ ಡಿ ನೋಟಿಫಿಕೇಷನ್ ಆಗಿರುವ ಜಮೀನುಗಳನ್ನು ಸಿದ್ದರಾಮಯ್ಯನವರು ಡಿನೋಟಿಫಿಕೇಷನ್ ಮಾಡಿದ್ದಾರೆ ಎನ್ನುವವರು ಎಂಥಾ ನೀಚರು ಹಾಗೂ ಅನೈತಿಕ ವ್ಯಕ್ತಿಗಳು ಎಂಬುದನ್ನು ರಾಜ್ಯದ ಜನ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular