ಅರ್ಧ ವಾರ್ಷಿಕ ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದಿವೆ ಎಂದು ಮನ ನೊಂದ ಬಾಲಕಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಕೊರಟಗೆರೆಯ ಪ್ರಿಯ ದರ್ಶಿನಿ ಕಾಲೇಜಿನ ವಿದ್ಯಾರ್ಥಿನಿ ಗುಣಶ್ರೀ ಎಂದು ಗುರುತಿಸಲಾಗಿದೆ.
ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಗುಣಶ್ರೀ ಇತ್ತೀಚೆಗೆ ತಾನೆ ಅರ್ಧ ವಾರ್ಷಿಕ ಪರೀಕ್ಷೆ ಬರೆದಿದ್ದಳು. ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದಿದ್ದವು.
ಕಡಿಮೆ ಅಂಕಗಳು ಬಂದಿರುವುದನ್ನು ನೋಡಿದರೆ ಬಯ್ಯುತ್ತಾರೆ ಎಂದು ಅಂಕಪಟ್ಟಿಯನ್ನು ಮನೆಯಲ್ಲಿ ಪೋಷಕರಿಗೆ ತೋರಿಸಲು ಹೆದರಿಕೊಂಡು ಕೊರಟಗೆರೆ ಪ್ರಥಮ ದರ್ಜೆ ಕಾಲೇಜು ಹತ್ತಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.


