ತುಮಕೂರು ಜಿಲ್ಲೆಯ ಶಿರಾ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಕಾನೂನು ಬಾಹಿರವಾಗಿ ನಡೆದಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ಸದಸ್ಯರು ನಗರಸಭೆ ಆವರಣದಲ್ಲಿ ಅಹೋರಾತ್ರಿ ಧರಣಿ ಮುಂದುವರೆಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ತಮ್ಮ ಪಕ್ಷದ ಸದಸ್ಯರು ಧರಣಿ ಸ್ಥಳಕ್ಕೆ ತೆರಳಿ ಬೆಂಬಲ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಟಿ.ಬಿ.ಜಯಚಂದ್ರ ಆಡಳಿತ ಪಕ್ಷ ಬಿಜೆಪಿ ಮತ್ತು ಜಾತ್ಯತೀತ ಜನತಾ ದಳದ ಪಕ್ಷಗಳು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿವೆ ಎಂದು ಆರೋಪಿಸಿದರು.
ಇದೇ ವೇಳೆ ಪ್ರತಿಭಟನಾ ನಿರತ ಸದಸ್ಯರೊಂದಿಗೆ ಚರ್ಚೆ ನಡೆಸಿದ ಟಿ.ಬಿ.ಜಯಚಂದ್ರ ಬಿಜೆಪಿ ಮತ್ತು ಜೆಡಿಎಸ್ ಕ್ರಮವನ್ನು ಖಂಡಿಸಿದರು.