Thursday, November 21, 2024
Google search engine
Homeಮುಖಪುಟಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ - ಸಿದ್ದರಾಮಯ್ಯ

ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ – ಸಿದ್ದರಾಮಯ್ಯ

ಸರ್ಕಾರಿ ಶಾಲೆಗಳ ಬಡ ಮಕ್ಕಳ ಮೇಲೆ ಕರ್ನಾಟಕದ ಬಿಜೆಪಿ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಮಿಷನ್ ಹೆಸರಲ್ಲಿ ರಾಜ್ಯದ ಖಜಾನೆ ಲೂಟಿ ಆಯಿತು, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ.. ಬಿಜೆಪಿ ಸರ್ಕಾರಕ್ಕೆ ಇಂಥಾ ದೈನೇಸಿ ಸ್ಥಿತಿ ಬರಬಾರದಿತ್ತು ಎಂದು ಟೀಕಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಹಾಲು,‌ ಬಿಸಿ ಊಟ, ಸಮವಸ್ತ್ರ-ಶೂ, ವಿದ್ಯಾಸಿರಿ, ಹಾಸ್ಟೆಲ್ ಸೌಲಭ್ಯಗಳನ್ನು ನೀಡಿದ್ದು ನಾವು. ವಿದ್ಯಾರ್ಥಿಗಳಿಂದ ಒಂದೊಂದೇ ಸೌಲಭ್ಯವನ್ನು ಕಿತ್ತುಕೊಳ್ಳುತ್ತಿರುವ ಸರ್ಕಾರ ಈಗ ಅವರಿಂದ ದುಡ್ಡು‌ಕಿತ್ತುಕೊಳ್ಳಲು ಹೊರಟಿದೆ ಎಂದು ಆರೋಪಿಸಿದ್ದಾರೆ.

ವೇದಿಕೆ ಮೇಲೆ ನಿಂತು ಧಮ್, ತಾಕತ್ ಎಂದು ಬೊಬ್ಬಿರಿಯುವವರು ವಿದ್ಯಾರ್ಥಿಗಳ ನೆರವಿನ‌ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿ ತಮ್ಮ ತಾಕತ್ ತೋರಿಸಲಿ ಎಂದು ಸವಾಲು ಹಾಕಿದ್ದಾರೆ.

ನಮ್ಮ ಸರ್ಕಾರ ವಿದ್ಯಾಸಿರಿ, ಅರಿವು,‌ ಶೂ ಭಾಗ್ಯ ವಿದೇಶಿ ವ್ಯಾಸಂಗಕ್ಕೆ ಆರ್ಥಿಕ ನೆರವು, ಶೈಕ್ಷಣಿಕ ಸಾಲ ಯೋಜನೆ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕು ನೀಡಿದರೆ, ಈಗಿನ ಬಿಜೆಪಿ ಸರ್ಕಾರ ಓದುವ ಮಕ್ಕಳಿಗೆ ತ್ರಿಶೂಲ ದೀಕ್ಷೆ ನೀಡಿ ಅವರ ಬದುಕನ್ನು ಕತ್ತಲಿಗೆ ದೂಡುತ್ತಿದೆ ಎಂದು ಆಪಾದಿಸಿದ್ದಾರೆ.

ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಪೋಷಕರಿಂದ ಹಣ ಸಂಗ್ರಹಿಸುವಂತೆ ಹೊರಡಿಸಿರುವ ಆದೇಶವನ್ನು ಈ ಕೂಡಲೇ ಹಿಂಪಡೆಯಬೇಕು ಮತ್ತು ಅನುದಾನ ಕೊರತೆಯಿಂದ ಸ್ಥಗಿತಗೊಂಡಿರುವ ಎಲ್ಲಾ ಶೈಕ್ಷಣಿಕ ಯೋಜನೆಗಳಿಗೆ ಪುನರ್ ಚಾಲನೆ ನೀಡಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular