Thursday, November 21, 2024
Google search engine
Homeಇತರೆಅಸ್ಪೃಶ್ಯತೆ ಆಚರಿಸುವ ನಮಗೆ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ? - ಕಾಂತಾರ ಚಿತ್ರದ ಬಗ್ಗೆ ನಟ ಕಿಶೋರ್...

ಅಸ್ಪೃಶ್ಯತೆ ಆಚರಿಸುವ ನಮಗೆ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ? – ಕಾಂತಾರ ಚಿತ್ರದ ಬಗ್ಗೆ ನಟ ಕಿಶೋರ್ ಕುಮಾರ್ ಪ್ರತಿಕ್ರಿಯೆ

ಕಾಂತಾರ ಸಿನಿಮಾದಲ್ಲಿ ಪೋಲಿಸ್ ಪಾತ್ರ ಮಾಡಿರುವ ದುನಿಯಾ ಖ್ಯಾತಿಯ ಕಿಶೋರ್ ಕುಮಾರ್ ಅವರೇ ಕಾಂತಾರ ಸಿನಿಮಾ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ನಮ್ಮ ಜನಪದೀಯರ ಕೋಲದ ಭೂತಕ್ಕೂ, ನೇಮದ ದೈವಕ್ಕೂ ಧರ್ಮದ ಬಣ್ಣ ಬಳಿಯುತ್ತಿರುವವರಲ್ಸಿ ಕಳಕಳಿಯ ಮನವಿ. ಅದೇ ದೈವದ ವೇಷ ಧರಿಸುವವನನ್ನು ಅಸ್ಪೃಷ್ಯನೆಂದು ಮನೆಯೊಳಗೆ ಸೇರಿಸದ, ಮನೆಯೊಳಗೆ ಬಂದರೆ ಶುದ್ಧಿ ಮಾಡಿಸುವ ಅಸ್ಪೃಷ್ಯತೆಯ ಆಚರಣೆಯಲ್ಲಿ ನಮಗೆ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ? ಜನರಿಗಾಗಿ ಬಾಂಬು ಸಿಡಿಸಿ ಜೀವತೆತ್ತ ಗರ್ನಾಲು ಸಾಹೇಬನ ಧರ್ಮ ಕಾಣುತ್ತಿಲ್ಲವೇಕೆ??

ಎಲ್ಲ ಒಳ್ಳೆಯ ಸಿನಿಮಾಗಳಂತೆ “ಕಾಂತಾರ” ಜಾತಿ, ಧರ್ಮ, ಭಾಷೆಗಳನ್ನು ಮೀರಿ ದೇಶದ ಜನಗಳನ್ನು ಬೆಸೆಯುತ್ತಿದೆ. ಮನರಂಜನೆಯ ಮೂಲಕವೇ ಹಲವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಿದೆ ಎಂದಿದ್ದಾರೆ.

ಅಂಥ ಸಿನಿಮಾವನ್ನು ಬಳಸಿ ಮೂಢನಂಬಿಕೆಯನ್ನೊ ಧರ್ಮಾಂಧತೆಯನ್ನೊ ಪ್ರಚೋದಿಸಿ ಜನಗಳನ್ನು ವಿಭಜಿಸುವ ಮಟ್ಟಕ್ಕೆ ಇಳಿದು ಬಿಟ್ಟರೆ ಇಂಥಾ ದೊಡ್ಡ ಗೆಲುವೂ ಮನುಷ್ಯತ್ವದ ದೊಡ್ಡ ಸೋಲಾಗಿಹೋದೀತು ಎಂದು ಹೇಳಿದ್ದಾರೆ.

ಕೇವಲ ಓಟಿಗಾಗಿ ಪಟೇಲ್, ಗಾಂಧಿ, ಬೋಸ್, ನೆಹ್ರೂ ಸಹಿತ ಕೋಟಿ ಕೋಟಿ ಸ್ವತಂತ್ರ್ಯ ಹೋರಾಟಗಾರರನ್ನೂ ಬಳಸುವ, ಬೈಯ್ಯುವ. ರಾಷ್ಟ್ರ ಗೀತೆ, ಧ್ವಜ, ಲಾಂಛನ, ಕವಿಗಳನ್ನೂ ಬಿಡದೆ ಕಬಳಿಸಿದ ದ್ವೇಷದ ದಲ್ಲಾಳಿಗಳು ಸಿನಿಮಾಗಳನ್ನೂ ಕಬಳಿಸುವ ಮುನ್ನಒಂದು ಕ್ಷಣ ಯೋಚಿಸಿ ಎಂದು ಸಲಹೆ ನೀಡಿದ್ದಾರೆ.

ನಮ್ಮ ಸಿನಿಮಾಗಳು ನಮ್ಮ ಹೆಮ್ಮೆ. ಅವುಗಳನ್ನು ಧರ್ಮಾಂಧ ರಾಜಕಾರಣದ ದಾಳಗಳಾಗುವುದು ಬೇಡ ಎಂದು ಹೇಳಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular