ದ್ವೇಷ ಭಾಷಣ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಹಿರಿಯ ನಾಯಕ ಮತ್ತು ಉತ್ತರ ಪ್ರದೇಶದ ಮಾಜಿ ಸಚಿವ ಅಜಂ ಖಾನ್ ಅವರನ್ನು ರಾಂಪುರ ನ್ಯಾಯಾಲಯ ಗುರುವಾರ ದೋಷಿ ಎಂದು ಘೋಷಿಸಿದೆ.
ಈ ಪ್ರಕರಣದಲ್ಲಿ ಖಾನ್ ಮತ್ತು ಇತರ ಇಬ್ಬರು ಆರೋಪಿಗಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 2 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
2019ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ಖಾನ್ ಅವರು ವಿವಾದಾತ್ಮಕ ಹೇಳಿಕೆಯಗಳನ್ನು ನೀಡಿ ದ್ವೇಷ ಭಾಷಣವನ್ನು ಮಾಡಿದ್ದರು. ಇದಕ್ಕೆ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು.
ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದ ನಂತರ ಈ ವರ್ಷದ ಆರಂಭದಲ್ಲಿ ಅಜಂ ಖಾನ್ ಅವರನ್ನು ಬಿಡುಗಡೆ ಮಾಡಲಾಯಿತು. ಅಜಂ ಖಾನ್ ಅವರು ಭ್ರಷ್ಟಾಚಾರ, ಕಳ್ಳತನ ಸೇರಿ ಸುಮಾರು 90 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.