Thursday, September 19, 2024
Google search engine
Homeಮುಖಪುಟಮುರುಘಾ ಶರಣರ ವಿರುದ್ದ 694 ಪುಟಗಳ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆ

ಮುರುಘಾ ಶರಣರ ವಿರುದ್ದ 694 ಪುಟಗಳ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆ

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಮಠಾಧೀಶ ಶಿವಮೂರ್ತಿ ಶರಣರ ವಿರುದ್ಧ ಚಿತ್ರದುರ್ಗ ಪೊಲೀಸರು 694 ಪುಟಗಳ ಚಾರ್ಜ್ ಶೀಟ್ ಅನ್ನು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಲಿಂಗಾಯತ ಧರ್ಮಗುರು, ಹಾಸ್ಟೆಲ್ ವಾರ್ಡನ್ ಮತ್ತು ಮತ್ತೊಬ್ಬ ಸಹಚರನ ವಿರುದ್ಧ ಪೊಲೀಸರು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಮುಂದೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಒಡನಾಡಿ ಸೇವಾ ಸಂಸ್ಥೆ ಎಂಬ ಎನ್.ಜಿ.ಒ ನೆರವಿನಿಂದ ಮೈಸೂರಿನಲ್ಲಿ ಇಬ್ಬರು ಬಾಲಕಿಯರು ದೂರು ದಾಖಲಿಸಿದ ನಂತರ ಮಠಾಧೀಶರ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಅತ್ಯಾಚಾರ ಆರೋಪದಡಿ ಸೆಪ್ಟೆಂಬರ್ 1ರಂದು ಬಂಧಿಸಲಾಗಿತ್ತು.

ಆಶ್ರಮದ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದ ಬಾಲಕಿಯರು ಮಠಾಧೀಶರು ತಮಗೆ ಲೈಂಗಿಕ ಕುರುಕುಳ ನೀಡಿದ್ದಾರೆ ಎಂದು ಹೇಳಿದ್ದರು.

ಈ ಮೂವರ ವಿರುದ್ದ ಇಲ್ಲಿಯವರೆಗೆ ಮೂರು ಎಫ್ಐಆರ್ ಗಳು ದಾಖಲಾಗಿವೆ. ಮೂರನೇ ಎಫ್ಐಆರ್ ನಲ್ಲಿ ಮಠಾಧೀಶರು ಮತ್ತು ಹಾಸ್ಟೆಲ್ ನ ವಾರ್ಡನ್ ಸೇರಿದಂತೆ ಆರು ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular