Thursday, January 29, 2026
Google search engine
Homeಮುಖಪುಟಪೇದೆಗಳ ಆಯ್ಕೆಗೆ ಹಿಂದಿ, ಇಂಗ್ಲೀಷ್ ನಲ್ಲಿ ಪರೀಕ್ಷೆಗೆ ಅವಕಾಶ - ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

ಪೇದೆಗಳ ಆಯ್ಕೆಗೆ ಹಿಂದಿ, ಇಂಗ್ಲೀಷ್ ನಲ್ಲಿ ಪರೀಕ್ಷೆಗೆ ಅವಕಾಶ – ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

ಕೇಂದ್ರ ಸರ್ಕಾರದ ಸಿಬ್ಬಂದಿ ಆಯ್ಕೆ ಆಯೋಗ ಹಿಂದಿ, ಇಂಗ್ಲೀಷ್ ನಲ್ಲಿ ವಿವಿಧ ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಕೇಂದ್ರದ ಬಿಜೆಪಿ ಸರ್ಕಾರ ಕನ್ನಡಿಗರ ಕತ್ತು ಹಿಚುಕುತ್ತಿದೆ ಹಾಗೂ ಕನ್ನಡಿಗರ ಅನ್ನ ಕಸಿದುಕೊಳ್ಳುತ್ತಿದೆ ಎಂದು ದೂರಿದ್ದಾರೆ.

ಕನ್ನಡದ ಕತ್ತು ಹಿಚುಕುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿರುವ ಕೇಂದ್ರ ಬಿಜೆಪಿ ಸರ್ಕಾರದ ಆಡಳಿತಕ್ಕೆ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಮುಗಿಸಲೇಬೇಕು ಎನ್ನುವ ಹಪಾಹಪಿ, ತವಕ, ಹಠ ಉತ್ಕಟವಾಗಿದೆ ಎನ್ನುವುದಕ್ಕೆ ಇಲ್ಲಿದೆ ಹೊಸ ಸಾಕ್ಷಿ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪೇದೆ ಆಯ್ಕೆಗೆ ಅರ್ಜಿ ಕರೆದಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಹಾಗಾದರೆ, ಕನ್ನಡವೂ ಸೇರಿ ಇತರೆ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಅಭ್ಯರ್ಥಿಗಳು ಏನು ಮಾಡಬೇಕು? ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ!! ಇದೆಂಥಾ ನ್ಯಾಯ? ಎಂದು ಅವರು ಪ್ರಶ್ನಿಸಿದ್ದಾರೆ.

ಗಡಿ ಭದ್ರತಾ ಪಡೆ, ಕೇಂದ್ರೀಯ ಕೈಗಾರಿಕಾ ಪಡೆ, ಕೇಂದ್ರ ಪೊಲೀಸ್ ಮೀಸಲು ಪಡೆ, ಇಂಡೋ ಟಿಬೆಟಿಯನ್ ಗಡಿ ಪೊಲೀಸ್, ಸಶಸ್ತ್ರ ಸೀಮಾ ಬಲ, ಸಚಿವಾಲಯ ಭದ್ರತಾ ಪಡೆ, ಅಸ್ಸಾಂ ರೈಫಲ್ಸ್, ಮಾದಕ ವಸ್ತು ನಿಯಂತ್ರಣಾ ಇಲಾಖೆ ಸೇರಿ ಹಲವು ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಜನವರಿಯಲ್ಲಿ ಪರೀಕ್ಷೆ ನಡೆಯಲಿದೆ.

ಈ ಪರೀಕ್ಷೆ ಕೇವಲ ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಇರುತ್ತದೆ. ಅಲ್ಲಿಗೆ ಹಿಂದಿ ಭಾಷಿಕರು ಬಿಟ್ಟರೆ ಬೇರೆ ಯಾರೂ ಆಯ್ಕೆ ಆಗಲೇಬಾರದು ಎನ್ನುವ ಹುನ್ನಾರ ಇದರಲ್ಲಿ ಅಡಗಿದೆ. ನನ್ನ ಅಭಿಪ್ರಾಯದಲ್ಲಿ, ಇದು ಕನ್ನಡ ವಿರೋಧಿ ಅಷ್ಟೇ ಅಲ್ಲ; ಭಾರತವನ್ನು ಉತ್ತರ, ದಕ್ಷಿಣ ಎಂದು ವಿಭಜಿಸಲು ಕೇಂದ್ರ ಬಿಜೆಪಿ ಸರಕಾರವೇ ಕೊಡುತ್ತಿರುವ ಕುಮ್ಮಕ್ಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರ ಈ ಅಪಾಯದ ಅರಿವು ಮಾಡಿಕೊಂಡು, ಕೂಡಲೇ ಈ ಕನ್ನಡ ವಿರೋಧಿ ಆದೇಶ ಹಿಂಪಡೆದು, ಹೊಸ ಆದೇಶ ಹೊರಡಿಸಿ ಕನ್ನಡವೂ ಸೇರಿ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ, ಬೀದಿಗಿಳಿದು ಕನ್ನಡಿಗರ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular