ಗುಜರಾತ್ ನಲ್ಲಿ ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿರುವ ಭಾರತೀಯ ಜನತಾ ಪಕ್ಷ ಸರ್ಕಾರವು ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಮಿತಿಯನ್ನು ರಚಿಸಲು ಶನಿವಾರ ನಿರ್ಧರಿಸಿದೆ. ಶನಿವಾರ ನಡೆದ ಸಭೆಯಲ್ಲಿ ಸಮಿತಿಯನ್ನು ರಚಿಸುವ ಪ್ರಸ್ತಾವನೆಗೆ ರಾಜ್ಯ ಸಂಪುಟ ಒಪ್ಪಿಗೆ ನೀಡಿದೆ ಎಂದು ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ್ ಸಾಂಘ್ವಿ ಹೇಳಿಕೆಯನ್ನು ಉಲ್ಲೇಖಿಸಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ರಾಜ್ಯ ಚುನಾವಣೆಯ ವೇಳಾಪಟ್ಟಿ ಮುಂದಿನ ವಾರ ಪ್ರಕಟವಾಗುವ ನಿರೀಕ್ಷೆಯಿರುವುದರಿಂದ ಭೂಪೇಂದ್ರ ಪಟೇಲ್ ನೇತೃತ್ವದ ಸಂಪುಟದ ಕೊನೆಯ ಸಭೆ ಎಂದು ಪರಿಗಣಿಸಲಾಗಿದೆ. ಸಮಿತಿಯು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿರುತ್ತದೆ ಮತ್ತು ಮೂರರಿಂದ ನಾಲ್ಕು ಸದಸ್ಯರನ್ನು ಹೊಂದಿರುತ್ತದೆ ಎಂದು ಕೇಂದ್ರ ಸಚಿವ ಪರಶೋತ್ತಮ್ ರೂಪಾಲಾ ಹೇಳಿದ್ದಾರೆ. ಈ ಹಿಂದೆ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಬಿಜೆಪಿ ಸರ್ಕಾರಗಳು ತಮ್ಮ ರಾಜ್ಯಗಳಲ್ಲಿ ಯುಸಿಸಿಯನ್ನು ಜಾರಿಗೆ ತರುವುದಾಗಿ ಘೋಷಿಸಿದ್ದವು.