ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರಕ್ಕೆ ನಾನೇ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಜೆಡಿಎಸ್ ಮುಖಂಡ ಎನ್.ಗೋವಿಂದರಾಜ್ ಹೇಳಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನತಾ ಜಲಧಾರೆ ಕಾರ್ಯಕ್ರಮದಲ್ಲೇ ನನ್ನನ್ನು ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ ಎಂದರು.
ತುಮಕೂರು ಜಿಲ್ಲೆಗೆ ಜನತಾ ಜಲಧಾರೆ ಯಾತ್ರೆ ನವೆಂಬರ್ 15 ರಂದು ಜಿಲ್ಲೆಗೆ ಆಗಮಿಸಲಿದ್ದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಸೇರಿದಂತೆ ಜಿಲ್ಲೆಯ ಪ್ರಮುಖ ಮುಖಂಡರು ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ನಾನು ಆಯ್ಕೆಯಾದರೆ ತುಮಕೂರು ನಗರ ಕ್ಷೇತ್ರದಲ್ಲಿ ರಸ್ತೆಗಳನ್ನು ಗುಂಡಿಮುಕ್ತಗೊಳಿಸುತ್ತೇನೆ. ಚರಂಡಿ ಮತ್ತು ಒಳಚರಂಡಿ ನಿರ್ಮಾಣ ಮಾಡುತ್ತೇನೆ. ಸುಸಜ್ಜಿತ ರಸ್ತೆಗಳನ್ನು ನಿರ್ಮಾಣಕ್ಕೆ ಒತ್ತು ನೀಡಲಾಗುವುದು, ವಿದ್ಯುತ್ ಇಲಾಖೆಯು ಖಾಸಗೀಕರಣಗೊಳ್ಳುತ್ತಿರುವುದನ್ನು ನಿಲ್ಲಿಸಲು ಕ್ರಮ ಕೈಗೊಳ್ಳಲು ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.