ಭಾರತೀಯ ಜನತಾ ಪಕ್ಷದ ಸರ್ಕಾರ ಭ್ರಷ್ಟಾಚಾರದ ಮೂಲಕ ಶಾಸಕರನ್ನು ಖರೀದಿಸಿ ಅಪರೇಷನ್ ಕಮಲ ಮಾಡಿ ಆಧಿಕಾರಕ್ಕೆ ಬಂದಿದೆ. ಇದಕ್ಕಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಮ್ಮ ಪಕ್ಷದ ಹಾಗೂ ಜೆಡಿಎಸ್ ಶಾಸಕರನ್ನು ಖರೀದಿಸಿ ಸರ್ಕಾರ ರಚನೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಇಂದು ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ. ಈ ಸರ್ಕಾರವನ್ನು 40% ಕಮಿಷನ್ ಸರ್ಕಾರ ಎಂದು ಗುತ್ತಿಗೆದಾರರ ಸಂಘದವರು ಲಿಖಿತವಾಗಿ ಪತ್ರ ಬರೆದು ಪ್ರಧಾನಿಗಳಿಗೆ ಹೇಳಿದ್ದಾರೆ. ಇದೇ ವಿಚಾರವನ್ನು ನಾವು ಬೆಳಗಾವಿ ಮತ್ತು ಬೆಂಗಳೂರಿನ ಅಧಿವೇಶನದಲ್ಲಿ ಪ್ರಸ್ತಾಪ ಮಾಡಲು ನಿಲುವಳಿ ಸೂಚನೆಗೆ ಅವಕಾಶ ಕೇಳಿದರೂ ಕೂಡ ಸರ್ಕಾರ ಸಭಾಧ್ಯಕ್ಷರ ಮೇಲೆ ಒತ್ತಡ ಹಾಕಿ ಅವಕಾಶ ಸಿಗದಂತೆ ಮಾಡಿತು ಎಂದು ಟೀಕಿಸಿದ್ದಾರೆ.
ಈ ಸರ್ಕಾರದ ಅವಧಿಯಲ್ಲಿ ನೇಮಕಾತಿಯಲ್ಲಿ, ವರ್ಗಾವಣೆಯಲ್ಲಿ, ಬಡ್ತಿ ನೀಡುವುದರಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿದೆ. ಇದರ ಜೊತೆಗೆ ಯಾವುದೇ ಕಾಮಗಾರಿಗಳಲ್ಲಿ ಗುತ್ತಿಗೆ ಕೆಲಸ ಪಡೆಯುವಾಗ, ಕೆಲಸ ಮಾಡುವಾಗ, ಎನ್.ಒ.ಸಿ ಪಡೆಯುವಾಗ, ಬಿಲ್ ಪಾಸ್ ಆಗುವಾಗಲೂ ಲಂಚ ಕೊಡಬೇಕು. 40% ಯಿಂದ 50ರಷ್ಟರವರೆಗೆ ರಾಜ್ಯದಲ್ಲಿ ಲಂಚ ನಡೆಯುತ್ತಿದೆ.
ಪಿಎಸ್ಐ ನೇಮಕಾತಿಯಲ್ಲಿ ಯಾವ ಅಕ್ರಮಗಳು ನಡೆದಿಲ್ಲ ಎಂದು ಗೃಹ ಸಚಿವರ ಅರಗ ಜ್ಞಾನೇಂದ್ರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದರು. ಹಾಗಾದರೆ ಎಡಿಜಿಪಿ ಅಮೃತ್ ಪೌಲ್ ಅವರು ಜೈಲು ಸೇರಿದ್ದು ಯಾಕೆ, ಏನು ಜೈಲು ನೋಡಲು ಹೋಗಿದ್ದಾರೆಯೇ ಎಂದು ಲೇವಡಿ ಮಾಡಿದರು.
ಮುಖ್ಯಮಂತ್ರಿಗಳು ದೀಪಾವಳಿ ಹಬ್ಬಕ್ಕೆ ನೀಡಿರುವ ಉಡುಗೊರೆಯಲ್ಲಿ 1 ರಿಂದ 3 ಲಕ್ಷ ಹಾಕಿ ಕಳಿಸಿದ್ದಾರೆ. ಇದು ಯಾವ ದುಡ್ಡು ಗೊತ್ತಾ? ಇದು ಭ್ರಷ್ಟಾಚಾರದ ಹಣ. ತಮ್ಮ ಭ್ರಷ್ಟಾಚಾರವನ್ನು ಬಯಲು ಮಾಡುತ್ತಾರೆ ಎಂದು ಲಂಚ ಕೊಟ್ಟಿರುವುದು. ಈ ಹಿಂದೆ ಪತ್ರಿಕೆಯೊಂದರಲ್ಲಿ ಪೊಲೀಸ್ ಇಲಾಖೆಯಲ್ಲಿ ಯಾವ ಹುದ್ದೆಯ ವರ್ಗಾವಣೆಗೆ ಎಷ್ಟು ಎಂದು ಹೋಟೆಲ್ ತಿಂಡಿ ಮೆನುವಿನಂತೆ ಲಂಚ ನಿಗದಿ ಮಾಡಿರುವುದು ಪ್ರಕಟವಾಗಿತ್ತು. ಈ ರೀತಿ ಬರೆಯಬಾರದು ಎಂಬುದು ಅವರ ಉದ್ದೇಶ. ಆಗ ಪ್ರಕಟವಾದ ಸುದ್ದಿ ಈಗ ಎಂಟಿಬಿ ನಾಗರಾಜ್ ಅವರಿಂದ ಸಬೀತಾಗಿದೆ ಎಂದು ಹೇಳಿದರು.
ಗೃಹ ಸಚಿವರು ತನ್ನನ್ನು ತಾನು ಆರ್.ಎಸ್.ಎಸ್ ನಿಂದ ಬಂದವ, ತಮ್ಮ ಇಲಾಖೆಯಲ್ಲಿ ಯಾವ ಹಗರಣ ನಡೆದಿಲ್ಲ ಎನ್ನುತ್ತಾರೆ. ಇವೆಲ್ಲ ಹಗರಣಗಳಲ್ಲವಾ? ಮುಖ್ಯಮಂತ್ರಿಗಳು ಪತ್ರಕರ್ತರಿಗೆ ಲಕ್ಷಾಂತರ ರೂಪಾಯಿ ದೀಪಾವಳಿ ಉಡುಗೊರೆಯಾಗಿ ನೀಡಿದ್ದಾರಲ್ವಾ ಇವರಿಗೆ ಮುಖ್ಯಮಂತ್ರಿಯಾಗಿ ತನ್ನ ಹುದ್ದೆಯಲ್ಲಿ ಮುಂದುವರೆಯುವ ಯಾವ ನೈತಿಕತೆ ಇದೆ? ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಮೇಲೆ ಮೊಕದ್
ಗೃಹ ಸಚಿವರು ತನ್ನನ್ನು ತಾನು ಆರ್,ಎಸ್,ಎಸ್ ನಿಂದ ಬಂದವ, ತಮ್ಮ ಇಲಾಖೆಯಲ್ಲಿ ಯಾವ ಹಗರಣ ನಡೆದಿಲ್ಲ ಎನ್ನುತ್ತಾರೆ. ಇವೆಲ್ಲ ಹಗರಣಗಳಲ್ಲವಾ? ಮುಖ್ಯಮಂತ್ರಿಗಳು ಪತ್ರಕರ್ತರಿಗೆ ಲಕ್ಷಾಂತರ ರೂಪಾಯಿ ದೀಪಾವಳಿ ಉಡುಗೊರೆಯಾಗಿ ನೀಡಿದ್ದಾರಲ್ವಾ ಇವರಿಗೆ ಮುಖ್ಯಮಂತ್ರಿಯಾಗಿ ತನ್ನ ಹುದ್ದೆಯಲ್ಲಿ ಮುಂದುವರೆಯುವ ಯಾವ ನೈತಿಕತೆ ಇದೆ? ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಮೇಲೆ ಮೊಕದ್ದಮೆ ಹೂಡಬೇಕು ಮತ್ತು ಈ ಇಬ್ಬರೂ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು.