Saturday, October 19, 2024
Google search engine
Homeಮುಖಪುಟಮಧ್ಯಪ್ರದೇಶ - ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ - ಆರೋಪಿ ಪತ್ತೆಗಾಗಿ ಶೋಧ

ಮಧ್ಯಪ್ರದೇಶ – ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಪತ್ತೆಗಾಗಿ ಶೋಧ

ನಾಲ್ಕು ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿ ಕಬ್ಬಿನ ಗದ್ದೆಯಲ್ಲಿ ಬಿಟ್ಟುಹೋಗಿರುವ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊದೆಯಲ್ಲಿ ಪ್ರಜ್ಞಾೀನ ಸ್ಥಿತಿಯಲ್ಲಿ ಪತ್ತೆಯಾದ ಮಗು ಇಂದೋರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ ಎಂದು ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಈ ಸಂಬಂಧ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ನಾಪತ್ತೆಯಾಗಿರುವ ಬಾಲಕಿಗಾಗಿ ಹುಡುಕಾಟ ನಡೆಸಲಾಗಿದೆ. ಪೊಲೀಸರು ಉಪಾಹಾರ ಗೃಹದಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಲಾಗಿದೆ.

ಆ ವ್ಯಕ್ತಿ ಭಾನುವಾರ ರಾತ್ರಿ ಸಂತ್ರಸ್ತೆಯ ಕುಟುಂಬವನ್ನು ಕೋಟ್ ಎರವಲು ಪಡೆಯಲು ಸಂಪರ್ಕಿಸಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ. ವಿಚಾರಣೆ ವೇಳೆ ಬಾಲಕಿಯನ್ನು ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿಯು ಬಾಲಕಿ ಮಲಗಿದ್ದಾಗ ಆಕೆಯನ್ನು ಅಪಹರಿಸಿ ಗದ್ದೆಗೆ ಕರೆದೊಯ್ದು ಅತ್ಯಾಚಾರ ಎಸಗಿ ನಂತರ ಪೊದೆಗೆ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ಮೇಲೆ ಐಪಿಸಿ ಸೆಕ್ಷನ್ 363 ಅಪಹರಣ, ಮತ್ತು 376 ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಆರೋಪಿಯು ಅಪರಾಧದಲ್ಲಿ ಇನ್ನೊಬ್ಬ ವ್ಯಕ್ತಿ ಭಾಗಿಯಾಗಿದ್ದಾನೆಂದು ಹೇಳಿಕೊಂಡಿದ್ದರೂ ಅದನ್ನು ದೃಢಪಡಿಸಿಲ್ಲ ಮತ್ತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular