ಕಾಡುಗೊಲ್ಲ ಸಮುದಾಯವನ್ನು ಅಲೆಮಾರಿ ಪಟ್ಟಿಗೆ ಸೇರಿಸುವಂತೆ ಶಿಫಾರಸು ಮಾಡಬೇಕು ಎಂದು ಕಾಡುಗೊಲ್ಲ ಅಸ್ಮಿತೆ ಹೋರಾಟ ಸಮಿತಿಯಿಂದ ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಆಧ್ಯಕ್ಷರನ್ನು ಒತ್ತಾಯಿಸಿದರು.
ಕಾಡುಗೊಲ್ಲ ಜನಾಂಗವೇ ಇಲ್ಲದ ಯಾದಗಿರಿ ಜಿಲ್ಲೆಯ ಪ್ರದೇಶಗಳಲ್ಲಿ ಕಾಡುಗೊಲ್ಲ ಅಧ್ಯಯನ ಮಾಡುವುದನ್ನು ಕೈಬಿಟ್ಟು ಕಾಡುಗೊಲ್ಲರು ನೆಲೆಸಿರುವ ಜಿಲ್ಲೆಗಳಲ್ಲಿ ಅಧ್ಯಯನ ಕೈಗೊಳ್ಳಬೇಕು ಎಂದು ಕಾಡುಗೊಲ್ಲ ಅಸ್ಮಿತೆ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಕೂನಿಕೆರೆ ರಾಮಣ್ಣ ಆಗ್ರಹಿಸಿದರು.
ನಮ್ಮ ಸಮುದಾಯ ಸಾಮಾಜಿಕ, ರಾಜಕೀಯ, ಆರ್ಥಿಕ ಸ್ಥಿತಿಗತಿಯ ಬಗ್ಗೆ ಸರ್ಕಾರಕ್ಕೆ ವರದಿ ನೀಡುವಂತೆ ಮನವಿ ಮಾಡಲಾಗಿದೆ ಎಂದು ರಾಮಣ್ಣ ತಿಳಿಸಿದ್ದಾರೆ.
ಬೆಂಗಳೂರಿನ ಅರಸು ಭವನ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿ ರಾಜ್ಯ ಮುಖಂಡ ಚಿತ್ತರಾಜು ಜಂಗಮರಹಳ್ಳಿ, ಜಿಲ್ಲಾ ಮುಖಂಡರಾದ ಜಿ.ಕೆ.ನಾಗಣ್ಣ ಇದ್ದರು.