ಆಮ್ ಆದ್ಮಿ ಪಕ್ಷ ಗುಜರಾತ್ ವಿಧಾನಸಭೆ ಚುನಾವಣೆಗೆ ಇಸುದನ್ ಗದ್ವಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದೆ.
ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಈ ಘೋಷಣೆ ಮಾಡಿದ್ದು ಪಕ್ಷ ನಡೆಸಿದ ಸಮೀಕ್ಷೆಯಲ್ಲಿ 40 ವರ್ಷದ ಗದ್ವಿ ಅವರು ಶೇಕಡಾ 73ರಷ್ಟು ಮತಗಳನ್ನು ಪಡೆದಿದ್ದಾರೆ ಎಂದು ಹೇಳಿದ್ದಾರೆ.
ಜನರು ತಮ್ಮ ಮುಖ್ಯಮಂತ್ರಿಯ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಪೋನ್ ಸಂಖ್ಯೆಗೆ ಕರೆ ಮಾಡಿ ಮತ್ತು ರೆಕಾರ್ಡ್ ಮಾಡಿದ ಸಂದೇಶವನ್ನು ಕೇಳುವ ಮೂಲಕ ಪಕ್ಷವು ಸಮೀಕ್ಷೆಯನ್ನು ನಡೆಸಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
ಪಾಟೀದಾರ್ ಸಮುದಾಯದ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಗೋಪಾಲ್ ಇಟಾಲಿಯಾ ವಿರುದ್ಧ ಗದ್ವಿ ಕಣಕ್ಕಿಳಿದಿದ್ದರು. ಗದ್ವಿ ಅವರು ಎಎಪಿಯ ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ಕಾರ್ಯಕಾರಿ ತಂಡದ ಸದಸ್ಯರಾಗಿದ್ದಾರೆ.
ಗದ್ವಿ ಅವರು ವಿಟಿವಿ ನ್ಯೂಸ್ ಮಾಜಿ ಸಂಪಾದಕರಾಗಿದ್ದರು ಮತ್ತು ಚಾನೆಲ್ ನ ಜನಪ್ರಿಯ ಸುದ್ಧಿ ಕಾರ್ಯಕ್ರಮ ಮಹಾಮಂತನ್ ಗೆ ನಿರೂಪಕರಾಗಿದ್ದ ಕೆಲಸ ಮಾಡುತ್ತಿದ್ದರು ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಗದ್ವಿ ಅವರು ದ್ವಾರಕಾ ಜಿಲ್ಲೆಯ ಪಿಪಾಲಿಯ ಗ್ರಾಮದ ರೈತ ಕುಟುಂಬದಿಂದ ಬಂದವರು ಮತ್ತು ರಾಜ್ಯದ ಜನಸಂಖ್ಯೆಯ ಶೇ.48ರಷ್ಟಿರುವ ಇತರೆ ಹಿಂದುಳಿದ ಜಾತಿಗಳಿಗೆ ಸೇರಿದವರು ಆಗಿದ್ದಾರೆ.