Monday, December 23, 2024
Google search engine
Homeಮುಖಪುಟಜೆಡಿಎಸ್ ಪಂಚರತ್ನ ಯಾತ್ರೆ ನವೆಂಬರ್ 18ರಿಂದ ಆರಂಭ

ಜೆಡಿಎಸ್ ಪಂಚರತ್ನ ಯಾತ್ರೆ ನವೆಂಬರ್ 18ರಿಂದ ಆರಂಭ

ಜೆಡಿಎಸ್ ಪಂಚರತ್ನ ರಥಯಾತ್ರೆ ಕೋಲಾರ ಜಿಲ್ಲೆ ಮುಳಬಾಗಿಲಿನ ಕುರುಡುಮಲೆಯಿಂದ ನವೆಂಬರ್ 18 ರಿಂದ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಯಾತ್ರೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭಾಗಿಯಾಗಲಿದ್ದಾರೆ.

ನವೆಂಬರ್ 18ರ ಮಧ್ಯಾಹ್ನ 2 ಗಂಟೆಗೆ ಮುಳಬಾಗಿಲು ಪಟ್ಟಣದ ತಿರುಪತಿ ಬೈಪಾಸ್ ರಸ್ತೆಯಲ್ಲಿರುವ ಬಾಲಾಜಿ ಭವನದ ಪಕ್ಕದ ಜಾಗದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಅಸಂಖ್ಯಾತ ಜನರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲಲೇಬೇಕೆಂಬ ಗುರಿ ಹೊಂದಿರುವ ಜೆಡಿಎಸ್ ಪಕ್ಷವು, ಸ್ವಂತ ಶಕ್ತಿಯ ಮೇಲೆ ಸರ್ಕಾರ ರಚಿಸಬೇಕೆಂಬ ಉದ್ದೇಶ ಹೊಂದಿದೆ. ಇದಕ್ಕಾಗಿ ಪಂಚರತ್ನ ಯಾತ್ರೆ ಹೆಸರಿನಲ್ಲಿ ಚುನಾವಣಾ ಪ್ರಚಾರವನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಪಂಚರತ್ನ ರಥಯಾತ್ರೆ; ನವ ಕರ್ನಾಟಕ ನಿರ್ಮಾಣಕ್ಕಾಗಿ ಮಹಾಯಾತ್ರೆ ಹೆಸರಿನಲ್ಲಿ ಈ ರಥಯಾತ್ರೆ ಕೈಗೊಳ್ಳಲಾಗುತ್ತಿದೆ. ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಪಂಚರತ್ನ ಪರಿಪೂರ್ಣ ಪರಿಹಾರ ಎಂದು ಬಿಂಬಿಸಲಾಗುತ್ತಿದೆ. ಶಿಕ್ಷಣವೆ ಆಧುನಿಕ ಶಕ್ತಿ, ಆರೋಗ್ಯ ಸಂಪತ್ತು. ಕೃಷಿ ಚೈತನ್ಯ, ಯುವ ನವಮಾರ್ಗ ಮತ್ತು ಮಹಿಳಾ ಸಬಲೀಕರಣ ಹಾಗೂ ವಸತಿ ಆಸರೆ ಪಂಚರತ್ನ ಯೋಜನೆಗಳಾಗಿವೆ ಎಂದರು.

ಗ್ರಾಮ ವಾಸ್ತವ್ಯ:

ಮುಳಬಾಗಿಲು ವಿಧಾನಸಭೆ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದ್ದು ರಾತ್ರಿ ಊರುಕುಂಟೆ ಮಿಟ್ಟೂರು ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿಗಳು ವಾಸ್ತವ್ಯ ಹೂಡುವರು.

ಗ್ರಾಮ ವಾಸ್ತವ್ಯದ ನಿಮಿತ್ತ ಕುಮಾರಸ್ವಾಮಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಥವಾ ದೇಗುಲದಲ್ಲಿ ವಾಸ್ತವ್ಯ ಹೂಡಲಿದ್ದು, ಗ್ರಾಮದ ಜನರ ಜತೆ ಸಂವಾದ, ವಿಚಾರ ವಿನಿಮಯ ನಡೆಸುವರು. ಮುಖ್ಯವಾಗಿ ಮಹಿಳೆಯರು, ಯುವಕರು, ರೈತರು, ವೃದ್ಧರ ಜತೆ ಚರ್ಚೆ ನಡೆಸುವರು.

ಮುಳಬಾಗಿಲು ಕ್ಷೇತ್ರದಲ್ಲಿ ಆರಂಭವಾಗುವ ರಥಯಾತ್ರೆಯು, ದಿನಕ್ಕೊಂದು ಕ್ಷೇತ್ರದಂತೆ ಕ್ರಮವಾಗಿ ಬಂಗಾರಪೇಟೆ, ಮಾಲೂರು, ಕೋಲಾರ, ಶ್ರೀನಿವಾಸಪುರ; ನಂತರ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ಶಿಡ್ಲಘಟ್ಟ, ಬಾಗೇಪಲ್ಲಿ, ಗೌರಿಬಿದನೂರು, ಚಿಕ್ಕಬಳ್ಳಾಪುರದ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಪ್ರವೇಶ ಮಾಡಲಿದೆ.

33

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular