ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರು ತಿಹಾರ್ ಜೈಲಿನಲ್ಲಿ ಪೂರ್ಣ ದೇಹದ ಮಸಾಜ್ ಮಾಡಿಸಿಕೊಂಡಿರುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಮೇ30ರಂದು ಜೈನ್ ಅವರನ್ನು ಬಂಧಿಸಿ ತಿಹಾರ್ ಜೈಲಿನಲ್ಲಿ ಇಡಲಾಗಿದೆ.
ಸೆಪ್ಟೆಂಬರ್ 13ರಂದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸಚಿವರು ತಮ್ಮ ಹಾಸಿಗೆಯ ಮೇಲೆ ಮಲಗಿದ್ದಾರೆ ಮತ್ತು ಕೆಲವು ಪೇಪರ್ ಗಳನ್ನು ಓದುತ್ತಿದ್ದಾರೆ. ಅವರ ಪಕ್ಕದಲ್ಲಿ ಕುಳಿತ ವ್ಯಕ್ತಿಯೊಬ್ಬರು ಅವರ ಪಾದವನ್ನು ಮಸಾಜ್ ಮಾಡುತ್ತಿರುವುದು ವೈರಲ್ ಆಗಿರುವ ವಿಡಿಯೋದಲ್ಲಿ ದೃಶ್ಯಗಳನ್ನು ಸೆರೆ ಹಿಡಿಯಲಾಗಿದೆ.
ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ದೆಹಲಿ ಸಚಿವರ ಕಾಲುಗಳಿಗೆ ಮತ್ತು ಬೆನ್ನಿಗೆ ಮಸಾಜ್ ಮಾಡುತ್ತಿರುವುದು ಕಂಡುಬಂದಿದೆ.
ಹಾಗಾದರೆ ಸಾಜಾ ಬದಲಿಗೆ ಸತ್ಯೇಂದ್ರ ಜೈನ್ ಪೂರ್ಣ ವಿವಿಐಪಿ ಮಜಾ ಪಡೆಯುತ್ತಿದ್ದಾರಾ? ತಿಹಾರ್ ಜೈಲಿನೊಳಗೆ ಮಸಾಜ್ ? ಐದು ತಿಂಗಳಿಂದ ಜಾಮೀನು ಪಡೆಯದ ಹವಾಲಾಬಾಜ್ ತಲೆ ಮಸಾಜ್ ಮಾಡಿ. ಎಎಪಿ ಸರ್ಕಾರ ನಡೆಸುತ್ತಿರುವ ಜೈಲಿನಲ್ಲಿ ನಿಯಮಗಳ ಉಲ್ಲಂಘನೆ ಎಂದು ಪೂನಾವಾಲಾ ಟ್ವೀಟ್ ಮಾಡಿದ್ದಾರೆ.