Wednesday, December 4, 2024
Google search engine
Homeಮುಖಪುಟಗಡಿ ವಿವಾದ - ಸರ್ವಪಕ್ಷ ಸಭೆ ಕರೆಯಲು ಸಿದ್ದರಾಮಯ್ಯ ಆಗ್ರಹ

ಗಡಿ ವಿವಾದ – ಸರ್ವಪಕ್ಷ ಸಭೆ ಕರೆಯಲು ಸಿದ್ದರಾಮಯ್ಯ ಆಗ್ರಹ

ಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಸರ್ವಪಕ್ಷಗಳ ಸಭೆ ಕರೆದು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬೆಳಗಾವಿ ಗಡಿವಿವಾದದ ಬಗ್ಗೆ ನವಂಬರ್ 23ರಂದು ಸುಪ್ರೀಂ ಕೋರ್ಟ್ ನಡೆಸಲಿರುವ ವಿಚಾರಣೆಯನ್ನು ಎದುರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಭರದಿಂದ ಸಿದ್ಧತೆ ನಡೆಸಿದ್ದಾರೆ ಎಂದು ಫೇಸ್ ಬುಕ್ ಪೇಜಿನಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ರಾಜ್ಯ ಮಂಡಿಸಬೇಕಾದ ವಾದದ ಬಗ್ಗೆ ಸಮಾಲೋಚನೆ ನಡೆಸಲು ವಿರೋಧ ಪಕ್ಷಗಳ ಸದಸ್ಯರನ್ನೊಳಗೊಂಡ ಸಮಿತಿ ರಚಿಸಿರುವುದು ಮತ್ತು ಆ ರಾಜ್ಯ ಗಡಿವಿವಾದವನ್ನು ಎಷ್ಟೊಂದು ಗಂಭೀರವಾಗಿ ಸ್ವೀಕರಿಸಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ತಿಳಿದ್ದಾರೆ.

ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗೆ ಬದ್ಧವಾಗಿ ರಾಜ್ಯ ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ನಮ್ಮ ಪಕ್ಷ ಬೆಂಬಲಿಸುತ್ತದೆ. ಕಾಲವ್ಯಯ ಮಾಡದೆ‌ ಮುಖ್ಯಮಂತ್ರಿಗಳು ವಿರೋಧ ಪಕ್ಷಗಳ ಸಭೆ ಕರೆದು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ‌ಮಾಡಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular