ಮೀಸಲಾತಿ ಹೆಚ್ಚಿಸುವಂತೆ ಒಕ್ಕಲಿಗ ಸ್ವಾಮೀಜಿಗಳು ಒತ್ತಾಯಿಸಿದ್ದಾರೆ. ಜನವರಿ 23ರ ಒಳಗೆ ಮೀಸಲಾತಿ ಹೆಚ್ಚಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಒಕ್ಕಲಿಗ ಸಮುದಾಯದ ಸಮಾರಂಭದಲ್ಲಿ ಶಿರಾದ ಸ್ಪಟಿಕಪುರಿ ಪೀಠದ ನಂಜಾವಧೂತ ಸ್ವಾಮೀಜಿ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದಪುರಿ ಸ್ವಾಮೀಜಿ ಆಗ್ರಹಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಲೋಕಸಭಾ ಸದಸ್ಯ ಸದಾನಂದಗೌಡ ಅವರ ಸಮ್ಮುಖದಲ್ಲಿ ಸ್ವಾಮೀಜಿಗಳು ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಜನವರಿ 23ರವರೆಗೆ ಗಡುವು ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ ಒಕ್ಕಲಿಗರ ಮೀಸಲಾತಿಗೆ ರಾಜ್ಯಾದ್ಯಂತ ಹೋರಾಟದ ಕೂಗು ಕೇಳುತ್ತಿದೆ. ಸಮುದಾಯದ ಕಲ್ಯಾಣಕ್ಕಾಗಿ ಮೀಸಲಾತಿ ಅತ್ಯಗತ್ಯವಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನ ರಾಜ್ಯ ಒಕ್ಕಲಿಗರ ಸಂಘದ ಆವರಣದಲ್ಲಿರುವ ಕುವೆಂಪು ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿರುವ ಡಿ.ಕೆ.ಶಿವಕುಮಾರ್ದೆ ಪಕ್ಷಬೇಧ ಮರೆತು ಸಮುದಾಯದ ನಾಯಕರು ಒಂದಾಗಿದ್ದಾರೆ ಎಂದು ತಿಳಿಸಿದ್ದಾರೆ.