Tuesday, January 14, 2025
Google search engine
Homeಮುಖಪುಟಕನ್ನಡಿಗರನ್ನು ಕೆಣಕುವ ಕೆಲಸ ಮಾಡಬೇಡಿ - ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಎಚ್ಚರಿಕೆ

ಕನ್ನಡಿಗರನ್ನು ಕೆಣಕುವ ಕೆಲಸ ಮಾಡಬೇಡಿ – ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಎಚ್ಚರಿಕೆ

ಮಹಾಜನ್ ವರದಿ ಪ್ರಕಾರ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರುವುದೇ ಇಲ್ಲ. ಹಾಗಾಗಿ ಮಹಾರಾಷ್ಟ್ರದವರು ವಿನಾ ಕಾರಣ ಬೀದಿಗೆ ಬಂದು ಕನ್ನಡಿಗರನ್ನು ಕೆಣಕುವ ಪ್ರಯತ್ನ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶೆಟ್ಟರ್ ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿ ವಿವಾದ ಬಹಳ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಮಹಾಜನ್ ವರದಿಯನ್ನು ಉಭಯ ರಾಜ್ಯಗಳು ಒಪ್ಪಿಕೊಂಡಿವೆ. ಆ ವರದಿಯಂತೆ ಬೆಳಗಾವಿ ಕರ್ನಾಟಕದಲ್ಲೇ ಉಳಿಯಲಿದೆ ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಬೇರೆ ವಿಚಾರ ಬಂದಾಗ ಮಹಾರಾಷ್ಟ್ರ ರಾಜಕಾರಣಿಗಳು ಹಾಗೂ ಎಂ.ಇಎಸ್ ಮುಖಂಡರು ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಈ ರೀತಿಯ ಕೆಲಸ ಮಾಡುತ್ತಾರೆ. ತಾವು ಬೆಳೆಯಲು ಈ ರೀತಿಯ ಕುತಂತ್ರ ಮಾಡಿ ಮಹಾರಾಷ್ಟ್ರ ರಾಜ್ಯದ ಮುಖಾಂತರ ಗಡಿ ಬಗ್ಗೆ ಮಾತನಾಡಿ, ಮರಾಠಿ ಹಾಗೂ ಕನ್ನಡಿಗರ ನಡುವೆ ಗೊಂದಲ ಸೃಷ್ಟಿಸುತ್ತಾರೆ ಎಂದು ಟೀಕಿಸಿದರು.

ಈಗ ಸಾಮಾನ್ಯ ಮರಾಠಿಗರು ಹಾಗೂ ಕನ್ನಡಿಗರ ಮಧ್ಯೆ ಸೌಹಾರ್ದಯುತ ವಾತಾವರಣ ಇದೆ. ಅದನ್ನು ಮಹಾರಾಷ್ಟ್ರದವರು ಪದೇ ಪದೇ ಕೆಣಕುವ ಕೆಲಸ ಮಾಡಬೇಕಿಲ್ಲ. ಈ ಬಾರಿ ಮಹಾರಾಷ್ಟ್ರದ ರಾಜಕಾರಣಿಗಳೇ ಕೆದಕುವ ಕೆಲಸ ಮಾಡುತ್ತಿದ್ದಾರೆ. ಅವರು ಸುಪ್ರೀಂಕೋರ್ಟ್ ಗೆ ಹೋಗುವ ಅವಶ್ಯಕತೆ ಇರಲಿಲ್ಲ. ನಮ್ಮ ಸರ್ಕಾರ ಕೂಡ ವಕೀಲರನ್ನು ನೇಮಕ ಮಾಡಿದೆ. ಮಹಾರಾಷ್ಟ್ರ ಕೂಡ ಅಲ್ಲಿ ಇದ್ದರೆ ಕೋರ್ಟ್ ಮೊರೆ ಹೋಗಲಿ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular