Thursday, May 30, 2024
Google search engine
Homeಇತರೆಕ್ರೀಡಾ ಕ್ಷೇತ್ರದ ಸಾಧಕರಿಗೆ ಕ್ರೀಡಾ ಪ್ರಶಸ್ತಿ ಘೋಷಣೆ - ಡಿಸೆಂಬರ 6ರಂದು ಪ್ರಶಸ್ತಿ ಪ್ರದಾನ

ಕ್ರೀಡಾ ಕ್ಷೇತ್ರದ ಸಾಧಕರಿಗೆ ಕ್ರೀಡಾ ಪ್ರಶಸ್ತಿ ಘೋಷಣೆ – ಡಿಸೆಂಬರ 6ರಂದು ಪ್ರಶಸ್ತಿ ಪ್ರದಾನ

ರಾಜ್ಯ ಸರ್ಕಾರದಿಂದ ಕ್ರೀಡಾ ಸಾಧಕರಿಗೆ ಕೊಡಮಾಡುವ ಕ್ರೀಡಾ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದ್ದು ಡಿಸೆಂಬರ್ 6ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ, ಕ್ರೀಡಾ ರತ್ನ, ಕ್ರೀಡಾ ಪೋಷಕ ಹಾಗೂ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಏಕಲವ್ಯ ಪ್ರಶಸ್ತಿಗೆ 15, ಕ್ರೀಡಾ ರತ್ನ ಪ್ರಶಸ್ತಿಗೆ 8, ಜೀವಮಾನ ಸಾಧನೆ ಪ್ರಶಸ್ತಿಗೆ 6 ಹಾಗೂ ಕ್ರೀಡಾ ಪೋಷಕ ಪ್ರಶಸ್ತಿಯನ್ನು ಮೂರು ಸಂಸ್ಥೆಗಳಿಗೆ ಕೊಡಲಾಗುವುದು ಎಂದು ಹೇಳಿದ್ದಾರೆ.

ಡಿಸೆಂಬರ್ 6ರಂದು ರಾಜಭೌನದ ಗಾಜಿನ ಮನೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕ್ರೀಡಾರತ್ನ ಪ್ರಶಸ್ತಿ :

1. ಕವನ ಎಂ.ಎಂ- ಬಾಲ್ ಬ್ಯಾಡ್ಮಿಂಟನ್, 2. ಬಿ ಗಜೇಂದ್ರ – ಗುಂಡು ಎತ್ತುವುದು, 3 ಶ್ರೀಧರ್ – ಕಂಬಳ, 4 ರಮೇಶ್ ಮಳವಾಡ್- ಖೋಖೋ, 5.ವೀರಭದ್ರ ಮುಧೋಳ್- ಮಲ್ಲಕಂಬ, 6. ಖುಷಿ ಹೆಚ್ – ಯೋಗ, 7.ಲೀನಾ ಅಂತೋಣಿ ಸಿದ್ದಿ- ಮಟ್ಟಿ ಕುಸ್ತಿ, 8. ದರ್ಶನ್-ಕಬ್ಬಡಿ.

ಏಕಲವ್ಯ ಪ್ರಶಸ್ತಿ :

1. ಚೇತನ್ ಬಿ- ಅಥ್ಲೆಟಿಕ್ಸ್, 2.ಶಿಖಾ ಗೌತಮ್- ಬ್ಯಾಡ್ಮಿಂಟನ್, 3.ಕೀರ್ತಿ ರಂಗಸ್ವಾಮಿ-ಸೈಕ್ಲಿಂಗ್, 4.ಅದಿತ್ರಿ ವಿಕ್ರಾಂತ್ ಪಾಟೀಲ್- ಫೆನ್ಸಿಂಗ್, 5.ಅಮೃತ್ ಮುದ್ರಾಬೆಟ್- ಜಿಮ್ನಾಸ್ಟಿಕ್, 6.ಶೇಷೇಗೌಡ-ಹಾಕಿ, 7.ರೇಷ್ಮಾ ಮರೂರಿ- ಲಾನ್ ಟೆನ್ನಿಸ್, 8.ಟಿಜೆ ಶ್ರೀಜಯ್- ಶೂಟಿಂಗ್, 9.ತನೀಷ್ ಜಾರ್ಜ್ ಮ್ಯಾಥ್ಯೂ-ಈಜು, 10.ಯಶಸ್ವಿನಿ ಘೋರ್ಪಡೆ- ಟೇಬಲ್ ಟೆನ್ನಿಸ್, 11.ಹರಿಪ್ರಸಾದ್‌ – ವಾಲಿಬಾಲ್, 12.ಸೂರಜ್ ಸಂಜು ಅಣ್ಣಿಕೇರಿ- ಕುಸ್ತಿ, 13.ಹೆಚ್ ಎಸ್ ಸಾಕ್ಷತ್- ನೆಟ್ ಬಾಲ್, 14.ಮನೋಜ್ ಬಿಎಂ- ಬ್ಯಾಸ್ಕೆಟ್ ಬಾಲ್, 15.ರಾಘವೇಂದ್ರ ಎಂ- ಪ್ಯಾರಾ ಅಥ್ಲೆಟಿಕ್ಸ್ ಪ್ರಶಸ್ತಿ ಪ್ರದಾನ ಮಾಡಲಾಗುವುದು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments