ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದೊಂದಿಗಿನ ಕಾನೂನು ಹೋರಾಟದಲ್ಲಿ ರಾಜ್ಯಕ್ಕೆ ಜಯ ಸಿಗಲಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಗಡಿ ವಿವಾದದಿಂದ ಉಂಟಾದ ಉದ್ವಿಗ್ನತೆಯ ಬಗ್ಗೆ ಮಹಾರಾಷ್ಟ್ರ ಸರ್ಕಾರವನ್ನು ದೂಷಿಸಿದ ಅವರು ರಾಜ್ಯದ ಗಡಿ ಮತ್ತು ಅದರ ಜನರನ್ನು ರಕ್ಷಿಸಲು ತಮ್ಮ ಸರ್ಕಾರ ಬದ್ದವಾಗಿದೆ ಎಂದು ಹೇಳಿದರು.
ಕರ್ನಾಟಕದ ನಿಲುವಿಗೂ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಇದು ಮಹಾರಾಷ್ಟ್ರದಿಂದ ದೀರ್ಘಕಾಲ ಎಳೆದ ವಿಷಯವಾಗಿದೆ. ಈ ಉದ್ವಿಗ್ನತೆಗಳು ಮಹಾರಾಷ್ಟ್ರದ ಕಾರಣದಿಂದ ಉಂಟಾಗಿವೆ. ಎರಡೂ ರಾಜ್ಯಗಳ ಜನರಲ್ಲಿ ಸಮೃದ್ಧಿ ಇದೆ. ಇದು ಸುಪ್ರೀಂಕೋರ್ಟ್ ನಲ್ಲಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಚುನಾವಣೆಗೂ ಮುನ್ನ ಗ್ರಾಮಗಳನ್ನು ವರ್ಗಾವಣೆ ಮಾಡುವುದು ಅವರ ತಂತ್ರವೇ ಎಂದು ಪ್ರಶ್ನಿಸಿದ ಮಾಜಿ ಸಿಎಂ ಉದ್ದವ್ ಠಾಕ್ರೆ ಅವರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ನಮ್ಮ ಗಡಿ ಮತ್ತು ಜನರನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ. ಮಹಾರಾಷ್ಟ್ರ, ಕೇರಳ ಮತ್ತು ತೆಲಂಗಾಣದಲ್ಲಿ ಕನ್ನಡಿಗರ ರಕ್ಷಣೆಗೆ ಬದ್ದರಾಗಿದ್ದೇವೆ ಎಂದು ನ್ಯೂಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.