ಮಾಜಿ ಶಾಸಕ ಸುರೇಶ್ ಗೌಡ ಕೊಲೆಗೆ ಸುಫಾರಿ ಕೊಟ್ಟಿರುವ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಸುರೇಶ್ ಗೌಡರ ಕೊಲೆಗೆ ಹಾಲಿ ಶಾಸಕ ಗೌರಿಶಂಕರ್ ಸುಫಾರಿ ನೀಡಿದ್ದಾರೆಂಬ ಸುದ್ದಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಇದೀಗ ತನಿಖೆ ನಡೆಯುತ್ತಿದ್ದು, ಇದಕ್ಕೆ ಯಾರು ಕಾರಣರಾಗಿದ್ದಾರೆ ಎಂದು ತಿಳಿದ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಈ ಪ್ರಕರಣದ ಬಗ್ಗೆ ನಾನು ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ತನಿಖೆಯಾದ ಮೇಲೆ ಸತ್ಯಾಂಶ ಹೊರಬರುತ್ತದೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಗೈರು ಹಾಜರಾದ ಕುರಿತು ಮಾತನಾಡಿದ ಸಿಎಂ, ಅವರಿಗೆ ಇದೊಂದು ದಿನ ವಿಶೇಷ ಕಾರ್ಯಕ್ರಮವಿದೆ. ಹಾಗಾಗಿ ಗೈರಾಗಿದ್ದಾರೆ. ಇದುವರೆಗೂ ಎಲ್ಲಾ ಸಂಕಲ್ಪ ಯಾತ್ರೆಗೂ ಬಂದಿದ್ದಾರೆ ಎಂದು ಸ್ಪಷ್ಟೀಕರಣ ನೀಡಿದರು.